ಸುಳ್ಯ, ಮಾ. 08 : ಕಟ್ಟಡದಿಂದ ಕಾಲುಜಾರಿ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಸಾವನ್ನಪ್ಪಿದ ಘಟನೆ ಅಡ್ಕಾರಿನಿಂದ ನಡೆದಿದೆ. ಅಡೂರು ಪಳ್ಳಂಗೊಡು ನಿವಾಸಿ ಜಬ್ಬಾರ್ ಎಂಬವರು ಮೃತಪಟ್ಟ ವ್ಯಕ್ತಿ .
ಅಡ್ಕಾರ್ ಜಿ ಅಬ್ದುಲ್ಲಾ ಎಂಬವರ ಮನೆಯಲ್ಲಿ ಪೈಟಿಂಗ್ ಕೆಲಸಕ್ಕಾಗಿ ನೀರು ಹಾಕಿ ತೊಳೆಯುತ್ತಿರುವ ಸಂದರ್ಭದಲ್ಲಿ ಜಬ್ಬಾರ್ ಅವರು ಕಾಲುಜಾರಿ ಕಟ್ಟಡದಿಂದ ಕೆಳಗೆ ಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದ ಕಾರಣ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.