ಚಿಲಿ, ಫೆ 07: ಹೆಲಿಕಾಪ್ಟರ್ ಅಪಘಾತದಲ್ಲಿ ಚಿಲಿ ದೇಶದ ಮಾಜಿ ಅಧ್ಯಕ್ಷ ಸೆಬಾಸ್ಟಿಯನ್ ಪಿನೆರಾ(74) ಅವರು ನಿಧನರಾಗಿದ್ದಾರೆ.
ಚಿಲಿ ದೇಶದ ದಕ್ಷಿಣ ಭಾಗದಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದರು ಎಂದು ಅವರ ಕಚೇರಿಯ ಹೇಳಿಕೆ ತಿಳಿಸಿದೆ. ಅಪಘಾತಕ್ಕೀಡಾದ ಹೆಲಿಕಾಪ್ಟರ್ ನಲ್ಲಿ ನಾಲ್ಕು ಮಂದಿ ಇದ್ದು, ಮೂವರು ಬದುಕುಳಿದಿದ್ದಾರೆ ಎಂದು ಸರ್ಕಾರದ ತುರ್ತು ಸಂಸ್ಥೆ ಸೆನಾಪ್ರೆಡ್ ತಿಳಿಸಿದೆ.