ಕಾಸರಗೋಡು, ಸೆ.23: ಅಮಿಬಿಕ್ ಮೆದುಳು ಜ್ವರದಿಂದ ಯುವಕನೋಬ್ಬ ಸಾವನ್ನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಚಟ್ಟಂಚಾಲ್ ಉಕ್ರಂಪಾಡಿಯ ಮಣಿಕಂಠ (36) ಸಾವನ್ನಪ್ಪಿದವರು.
ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂಠ ಅನಾರೋಗ್ಯದ ಹಿನ್ನಲೆಯಲ್ಲಿ ಅವರನ್ನುಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ತಪಾಸಣೆಗೊಳಪಡಿಸಿದಾಗ ಮಣಿಕಂಠ ಅವರಿಗೆ ಅಮಿಬಿಕ್ ಸೋಂಕು ಇರುವುದು ದೃಢಪಟ್ಟಿದೆ ಎನ್ನಲಾಗಿದೆ.
ಮಣಿಕಂಠ ಅವರಿಗೆ ಮುಂಬೈಯಲ್ಲಿ ಸೋಂಕು ತಗಲಿರಬಹುದು ಎಂದು ಶಂಕಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಯಾವುದೇ ಆತಂಕ ಪಡಬೇಕಿಲ್ಲ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಈ ಜ್ವರದ ಬಗ್ಗೆ ಮುನ್ನಚ್ಚರಿಕೆ ವಹಿಸಬೇಕುಎಂದು ಆರೋಗ್ಯ ಇಲಾಖೆ ತಿಳಿಸಿದೆ.