ಕುಂದಾಪುರ, ಡಿ. 11 : ಹಿರಿಯ ರಂಗಭೂಮಿ ಕಲಾವಿದ, ರೂಪಕಲಾ ಕುಂದಾಪುರ ಸಂಸ್ಥೆಯ ಮೂರು ಮುತ್ತು ಖ್ಯಾತಿಯ ನಟ ಅಶೋಕ್ ಶ್ಯಾನುಭಾಗ್ (54ವರ್ಷ) ಅಲ್ಪಕಾಲದ ಅಸೌಖ್ಯದಿಂದಾಗಿ ಶುಕ್ರವಾರ ನಿಧನರಾಗಿದ್ದಾರೆ.
ನಟ ಅಶೋಕ್ ಶ್ಯಾನುಭಾಗ್ ಅವರು ಮೂರು ಮುತ್ತು, ಅವನಲ್ಲ ಇವನು, ಪಾಪ ಪಾಂಡು, ಅಳುವುದೋ ನಗುವುದೋ, ರಾಮ ಕೃಷ್ಣ ಗೋವಿಂದ ಇನ್ನುಹಲವಾರು ನಾಟಕಗಳಲ್ಲಿ ಹಾಸ್ಯ ಪಾತ್ರದಿಂದ ಮಿಂಚಿದ್ದರು.