ಚೆನ್ನೈ, ಅ.07 : ಭಾರತೀಯ ವಾಯುಪಡೆಯ 92 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ಹಿನ್ನೆಲೆ ಚೆನ್ನೈನ ಮರೀನಾ ಬೀಚ್ನಲ್ಲಿ ನಡೆದ ಏರ್ ಶೋ ವೇಳೆ ಬಿಸಿಲಿನ ಝಳಕ್ಕೆ ಐವರು ಮೃತಪಟ್ಟಿದ್ದಾರೆ, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಜಾನ್ (60), ತಿರುವೊಟ್ಟಿಯೂರು ಮೂಲದ ಕಾರ್ತಿಕೇಯನ್, ದಿನೇಶ್ ಕುಮಾರ್ (37), ಪೆರುಂಗಲತ್ತೂರಿನ ಶ್ರೀನಿವಾಸನ್ ಮೃತರು.
ವಾಯುಪಡೆ ಸಂಸ್ಥಾಪನಾ ದಿನ ನಿಮಿತ್ತ ದಕ್ಷಿಣ ಭಾರತದಲ್ಲಿ ನಡೆದ ಮೊದಲ ಏರ್ ಶೋ ಇದಾಗಿತ್ತು.ಕಾರ್ಯಕ್ರಮದಲ್ಲಿ ಸುಮಾರು 72 ವಿಮಾನಗಳು ವಿವಿಧ ಸಾಹಸಗಳನ್ನು ಪ್ರದರ್ಶಿಸಿದ್ದವು. 15 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಣೆಗೆ ಆಗಮಿಸಿದ್ದರು.
ಏರ್ ಶೋ ವೀಕ್ಷಿಸಿ ವಾಪಾಸ್ ತೆರಳುವಾಗ ಬಿಸಿಲಿನ ತಾಪಕ್ಕೆ ಜನರ ನಡುವೆ ನೂಕು ನುಗ್ಗಲು ಸಂಭವಿಸಿ,ಉಸಿರಾಡಲಾಗದೇ 230ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. 100 ಕ್ಕೂ ಹೆಚ್ಚು ಜನರಿಗೆ ಉಸಿರಾಟದ ಸಮಸ್ಯೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.