ಶ್ರೀನಗರ, ಜು. 12: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದ್ದು, ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ಮನೆಯಿಂದ ಹೊರಕ್ಕೆ ಓಡಿ ಬಂದಿದ್ದಾರೆ ಎಂದು ವರದಿಯಾಗಿದೆ.
ಬಾರಾಮುಲ್ಲಾ ಪ್ರದೇಶದಲ್ಲಿ ಜು. 12 ರಂದು ಮಧ್ಯಾಹ್ನ 12.26ಕ್ಕೆಸಂಭವಿಸಿರುವ ಭೂಕಂಪಕ್ಕೆ ಜನ ಮನೆಯಿಂದ ಹೊರಕ್ಕೆ ಓಡಿ ಬಂದಿದ್ದಾರೆ. ಭೂಕಂಪದಿಂದಾಗಿ ಪ್ರಾಣಾಪಾಯ ಸೇರಿ ಯಾವುದೇ ದುರಂತ ಸಂಭವಿಸಿಲ್ಲ ಎಂದು ಹೇಳಲಾಗಿದೆ.
ಭೂಮಿಯ 10 ಕಿಲೋಮೀಟರ್ ಆಳದಲ್ಲಿ ಕಂಪನ ಉಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.