ಬಿಹಾರ, ಮಾ.18: ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ಕಾರೊಂದು ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ7 ಮಂದಿ ಮೃತಪಟ್ಟ ಘಟನೆ ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
ಬಿಹಾರದ ಖಗಾರಿಯಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 31ರಲ್ಲಿ ಬರುತ್ತಿದ್ದ ವೇಳೆ ಕಾರು ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ . ಅಪಘಾತದಲ್ಲಿ ಕಾರಿನಲ್ಲಿದ್ದ 7ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.