ಹೊಸದಿಲ್ಲಿ : ಕೇಂದ್ರ ಸರಕಾರವು ನೂತನ ಸಂಪುಟ ಕಾರ್ಯದರ್ಶಿಯನ್ನಾಗಿ ಹಿರಿಯ ಐಎಎಸ್ ಅಧಿಕಾರಿ ಟಿ.ವಿ.ಸೋಮನಾಥನ್ ಅವರನ್ನು ಶನಿವಾರ ನೇಮಕಗೊಳಿಸಿದೆ. ಅವರು ಪ್ರಸ್ತುತ ಹಣಕಾಸು ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಸದ್ಯ ಸಂಪುಟ ಕಚೇರಿಯಲ್ಲಿ ವಿಶೇಷ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸೋಮನಾಥನ್ ಅವರು ಆಗಸ್ಟ್ 30 ರಂದು ಸಂಪುಟ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಸೋಮನಾಥನ್ ಅವರನ್ನು ಎರಡು ವರ್ಷಗಳ ಅವಧಿಗೆ ಸಂಪುಟ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.