ಕಠ್ಮಂಡು, ಸೆ. 30 : ನೇಪಾಳದಲ್ಲಿ ನಿರಂತರ ಮಳೆಯಿಂದ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ಇದರ ಪರಿಣಾಮ ನೇಪಾಳದಲ್ಲಿ 112 ಜನರು ಸಾವನ್ನಪ್ಪಿದ್ದಾರೆ. ಹಾಗೂ 79 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಶನಿವಾರ ಹೆಲಿಕಾಪ್ಟರ್ಗಳು ಮತ್ತು ಮೋಟಾರ್ಬೋಟ್ಗಳೊಂದಿಗೆ 3,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ರಕ್ಷಣಾ ಕಾರ್ಯಗಳನ್ನು ಮಾಡಿ ಅನೇಕರನ್ನು ರಕ್ಷಿಸಿದ್ದಾರೆ. ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದೆ. ನಿರಾಶ್ರಿತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ನೇಪಾಳ ಸರ್ಕಾರ ಸೂಚನೆ ನೀಡಿದೆ.
ನೇಪಾಳದಲ್ಲಿ ಪ್ರವಾಹ ಮತ್ತು ಭೂಕುಸಿತದ ಪರಿಣಾಮ ಕಾಣೆಯಾದ ಜನರನ್ನು ರಕ್ಷಿಸಲು ಮತ್ತು ಹುಡುಕಲು ಪೊಲೀಸರು ಇತರ ಏಜೆನ್ಸಿಗಳು ಮತ್ತು ಸ್ಥಳೀಯರೊಂದಿಗೆ ಕಾರ್ಯಾಚರಣೆ ನಡೆಸುತ್ತಿವೆ. ಎಂದು ನೇಪಾಳದ ರಾಷ್ಟ್ರೀಯ ವಿಪತ್ತು ಅಪಾಯ ಕಡಿತ ಮತ್ತು ನಿರ್ವಹಣಾ ಪ್ರಾಧಿಕಾರದ ವಕ್ತಾರ ಬಸಂತ ಅವರು ತಿಳಿಸಿದ್ದಾರೆ.