ದಿಸ್ಪುರ, ಜ. 03 : ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 14 ಮಂದಿ ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿರುವ ಘಟನೆ ಅಸ್ಸಾಂನ ದೇರ್ಗಾಂವ್ನಲ್ಲಿ ಬುಧವಾರ ನಡೆದಿದೆ.
ತಿನ್ಸುಕಿಯಾದ ತಿಲಿಂಗ ಮಂದಿರಕ್ಕೆ 45 ಮಂದಿ ಪ್ರವಾಸಿಗರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ದೇರ್ಗಾಂವ್ನಲ್ಲಿ ಈ ಪ್ರವಾಸಿ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.