ಬಂಟ್ವಾಳ,ಅ. 20 : ಪ್ರೇಮ ವೈಫಲ್ಯ ದಿಂದ ಮನನೊಂದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಕಾಮಾಜೆ ಎಂಬಲ್ಲಿ ನಡೆದಿದೆ.
ಕಡೇಶಿವಾಲಯ ಗ್ರಾಮದ ನೆಲ್ಲಿ ಗುಡ್ಡೆ ನಿವಾಸಿ ಸಚಿನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ.
ಸಚಿನ್ ಇಲೆಕ್ಟ್ರೀಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಅ.18 ರಂದು ಕೆಲಸಕ್ಕೆ ಹೋದವನು ರಾತ್ರಿಯಾದರೂ ಮನೆಗೆ ಬರದ ಹಿನ್ನೆಲೆಯಲ್ಲಿ ಈತನನ್ನು ಹುಡುಕಲು ಶುರು ಮಾಡಿದ್ದರು.
ಪೋನ್ ಮಾಡಿದಾಗ ಪೋನ್ ರಿಂಗು ಕೇಳುತ್ತಿದ್ದ ಜಾಗಕ್ಕೆ ಹೋಗಿ ನೋಡಿದಾಗ ಆತ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆತ್ಮಹತ್ಯೆ ಮಾಡುವ ಮೊದಲು ಈತ ಚೀಟಿಯನ್ನು ಬರೆದು ಕಿಸೆಯಲ್ಲಿಟ್ಟಿದ್ದಾನೆ ಎನ್ನಲಾಗಿದೆ.
ನಗರ ಠಾಣಾ ಇನ್ಸ್ ಪೆಕ್ಟರ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.