ಬೆಂಗಳೂರು, ನ.06 : ಬೆಂಗಳೂರು ಅರಮನೆ ಮೈದಾನದಲ್ಲಿ ನ.24ರಿಂದ 26 ರತನಕ ನಡೆಯಲಿರುವ ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಒಂದು ಕೋಟಿ ರೂ ಘೋಷಣೆ ಮಾಡಿದ್ದಾರೆ ಎಂದು ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಕರಾವಳಿಯ ಜನಪದ ಕ್ರೀಡೆಯಾದ ಕಂಬಳವನ್ನು ಆಯೋಜನೆ ಮಾಡಲಾಗಿದೆ. ಬೆಂಗಳೂರು ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಕಂಬಳ ಸಮಿತಿ ನೇಮಕ ಮಾಡಿದೆ. ಕರೆ ಮುಹೂರ್ತದ ಬಳಿಕ ಅನೇಕ ಸಚಿವರು ಕಂಬಳ ನಡೆಯುವ ಅರಮನೆ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಬೆಂಗಳೂರು ಕಂಬಳ’ಕ್ಕೆ ಬಾಲಿವುಡ್ ನಟಿಯರು, ಸೆಲೆಬ್ರಿಟಿಗಳು ಆಗಮಿಸಲಿದ್ದಾರೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
2 Comments
Pingback: jazz instrumental
Pingback: bossa nova music