ಬೆಳ್ತಂಗಡಿ, ಸೆ. 24 : ಮುಂಡಾಜೆಯ ಕಾಪುವಿನಲ್ಲಿರುವ ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು ನುಗ್ಗಿ ನರ್ಸರಿ ಗಿಡಗಳಿಗೆ ಅಪಾರ ಪ್ರಮಾಣದ ಹಾನಿ ಉಂಟು ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಅರಣ್ಯ ಪ್ರದೇಶದಲ್ಲಿ ನಾಟಿ ಮಾಡಲು ಬೆಳೆಸಲಾಗಿದ್ದ ಬಿದಿರು, ಹಲಸು, ಹೆಬ್ಬಲಸು, ಗಾಳಿ, ಬಲಿಂದ್ರ ಪಾಲೆ ಜಾತಿಯ ಸುಮಾರು 3,200ಕ್ಕಿಂತ ಹೆಚ್ಚು ಗಿಡಗಳನ್ನು ಆನೆಗಳು ತುಳಿದು ಧ್ವಂಸಗೊಳಿಸಿವೆ.
ಅರಣ್ಯ ಇಲಾಖೆಯ ಈ ನರ್ಸರಿ ರಾಷ್ಟ್ರೀಯ ಹೆದ್ದಾರಿಯಿಂದ 20 ಮೀ. ಅಂತರದಲ್ಲಿದ್ದು, ಆನೆಗಳು ಹೆದ್ದಾರಿ ಬದಿಯು ಸುಳಿದಾಡಿರುವ ಹೆಜ್ಜೆ ಗುರುತುಗಳು ಕಂಡುಬಂದಿವೆ. ಒಂದು ಮರಿಯಾನೆ ಸಹಿತ ಎರಡು ಆನೆಗಳು ದಾಳಿ ಇಟ್ಟಿರಬಹುದೆಂದು ಶಂಕಿಸಲಾಗಿದೆ.
ಉಪವಲಯ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
1 Comment
Pingback: yoga music