ಮಂಗಳೂರು, ಅ 08 : ಬೈಕ್ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಸಾವನ್ನಪ್ಪಿದ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚೂರು ಬಳಿ ಶುಕ್ರವಾರ ಸಂಭವಿಸಿದೆ ಎಂದು ವರದಿಯಾಗಿದೆ.
ಮೃತರನ್ನು ಗುರುಪುರ ಹೊಸಮನೆ ನಿವಾಸಿ ಸಚಿನ್ ಕುಮಾರ್ ಆಚಾರ್ಯ (33) ಸಚಿನ್ ಎಂದು ಗುರುತಿಸಲಾಗಿದೆ.
ಸಚಿನ್ ಕುಮಾರ್ ಅವರು ಎಚ್ಡಿಎಫ್ಸಿ ಬ್ಯಾಂಕ್ನಲ್ಲಿ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.