ಮಂಗಳೂರು,ಅ. 25: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಪೂಜೆಗೊಂಡ ನವದುರ್ಗೆಯರು, ಗಣಪತಿ ಮತ್ತು ಶ್ರೀ ಶಾರದಾ ದೇವಿ ವಿಗ್ರಹಗಳ ವೈಭವದ ಮಂಗಳೂರು ದಸರಾ ಮೆರವಣಿಗೆ ಶುಕ್ರವಾರ ನಗರದಲ್ಲಿ ನಡೆಯಿತು.
ದಸರಾ ಮಹೋತ್ಸವದ ವೈಭವದ ಶೋಭಾಯಾತ್ರೆಯಲ್ಲಿ ಐವತ್ತಕ್ಕೂ ಅಧಿಕ ಟ್ಯಾಬ್ಲೋಗಳು, ಹುಲಿ ವೇಷದ ಟ್ರಕ್ಗಳು, ಸಾಲು ಸಾಲು ಬಣ್ಣದ ಕೊಡೆಗಳು, ಕೇರಳದ ಚೆಂಡೆ, ನಾಸಿಕ್ ಬ್ಯಾಂಡ್, ಭಜನಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.
ಮೆರವಣಿಗೆಯು ಶ್ರೀಕ್ಷೇತ್ರದಿಂದ ಸುಮಾರು 9 ಕಿ.ಮೀ. ದೂರ ಸಂಚರಿಸಿ ಬುಧವಾರ ಮುಂಜಾನೆ ವೇಳೆಗೆ ಶ್ರೀಕ್ಷೇತ್ರಕ್ಕೆ ಮರಳಲಿತು. ಬಳಿಕ ಮೃಣ್ಮಯ ಮೂರ್ತಿಗಳು ದೇವಾಲಯದ ಕಲ್ಯಾಣಿಯಲ್ಲಿ ಜಲಸ್ತಂಭನಗೊಂಡು ಮಂಗಳೂರು ದಸರಾ ಸಂಪನ್ನಗೊಂಡಿತು.