ಮಂಗಳೂರು, ಅ.03: ದಕ್ಷಿಣ ಕನ್ನಡ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಭಾರತ ಸೇವಾದಳದ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 154ನೇ ಜಯಂತಿ ಮಂಗಳೂರು ಪುರ ಭವನ ಬಳಿಯಿರುವ ರಾಜಾಜಿ ಪಾಕ್೯ ನಲ್ಲಿ ಸೋಮವಾರ ನಡೆಯಿತು.
ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಈ ವೇಳೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ಸರಳತೆ ಮತ್ತು ಸತ್ಯದ ದಾರಿಯಲ್ಲಿ ನಡೆಯಬೇಕೆಂಬ ಮಹಾತ್ಮಾ ಗಾಂಧಿಯವರ ಪರಿಕಲ್ಪನೆ ನಮಗೆ ಆದರ್ಶವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ,ಮೇಯರ್ ಸುಧೀರ್ ಶೆಟ್ಟಿ ಕಣ್ಣೂರ್, ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತ ಆನಂದ್, ದ.ಕ. ಜಿಲ್ಲಾ ಪಂಚಾಯತ್ ಸಿಇಒ ಆನಂದ್, ಪೊಲೀಸ್ ಆಯುಕ್ತ ಆನುಪಮ್ ಅಗರ್ವಾಲ್, ಜಿಲ್ಲಾ ಎಸ್ಪಿ ರಿಷ್ಯಂತ್ ಸಿ.ಬಿ., ಭಾರತ ಸೇವಾದಳದ ಪ್ರಮುಖರಾದ ಬಶೀರ್ ಬೈಕಂಪಾಡಿ ಮತ್ತು ಟಿ.ಕೆ.ಸುಧೀರ್, ಪ್ರದೀಪ್ ಕುಮಾರ್ ಕಲ್ಕೂರ ಮತ್ತಿತರರು ಉಪಸ್ಥಿತರಿದ್ದರು.
1 Comment
Pingback: stress relief