ಮಹಾರಾಷ್ಟ್ರ ಡಿ.31 : ಗ್ಲೌಸ್ ತಯಾರಿಸುವ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ ಸಂಭವಿಸಿ ಆರು ಕಾರ್ಮಿಕರು ಮೃತಪಟ್ಟ ಘಟನೆ ಮಹಾರಾಷ್ಟ್ರದ ಸಂಭಾಜಿ ನಗರದಲ್ಲಿ ನಡೆದಿದೆ.
ಭಾನುವಾರ ಬೆಳಗ್ಗೆ 2 ಗಂಟೆ ಸುಮಾರಿಗೆ ಅಗ್ನಿ ದುರಂತ ಸಂಭವಿಸಿದ್ದು, ಕಾರ್ಖಾನೆಯ ಒಳಗಿದ್ದ ಆರು ಜನ ಸಜೀವ ದಹನಗೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಯು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಬೆಂಕಿಯು ಇಡೀ ಕಾರ್ಖಾನೆಗೆ ವ್ಯಾಪಿಸಿದ ಕಾರಣ ಬೆಂಕಿ ನಂದಿಸುವಷ್ಟರಲ್ಲಿಯೇ ಆರು ಕಾರ್ಮಿಕರು ಮೃತಪಟ್ಟಿದ್ದರು ಎನ್ನಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸಂಪೂರ್ಣವಾಗಿ ಅಗ್ನಿ ನಂದಿಸಿದ ಬಳಿಕವೇ ಎಷ್ಟು ಜನ ಮೃತಪಟ್ಟಿದ್ದಾರೆ ಎಂಬುದು ಗೊತ್ತಾಗಲಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.