ಲಂಡನ್ , ಡಿ 02: ಕಳೆದ ತಿಂಗಳು ಯುಕೆಯಲ್ಲಿ ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಈಗ ಲಂಡನ್ನ ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮೃತರನ್ನು ಮಿತ್ಕುಮಾರ್ ಪಟೇಲ್(23) ಎಂದು ಗುರುತಿಸಲಾಗಿದೆ.
ಮಿತ್ಕುಮಾರ್ ಪಟೇಲ್ ಉನ್ನತ ವ್ಯಾಸಂಗಕ್ಕಾಗಿ ಸೆಪ್ಟೆಂಬರ್ನಲ್ಲಿ ಯುಕೆಗೆ ಆಗಮಿಸಿದ್ದರು. ನವೆಂಬರ್ 17 ರಂದು ನಾಪತ್ತೆಯಾಗಿದ್ದರು. ಕೊನೆಗೆ ಅವರ ಶವ ಲಂಡನ್ನ ಥೇಮ್ಸ್ ನದಿಯಲ್ಲಿ ಪತ್ತೆಯಾಗಿದೆ.
ನವೆಂಬರ್ 21 ರಂದು ಪೂರ್ವ ಲಂಡನ್ನ ಕ್ಯಾನರಿ ವಾರ್ಫ್ ಪ್ರದೇಶದ ಬಳಿ ಥೇಮ್ಸ್ ನದಿಯಲ್ಲಿ ಅವರ ದೇಹವನ್ನು ಮೆಟ್ರೋಪಾಲಿಟನ್ ಪೊಲೀಸರು ಪತ್ತೆ ಹಚ್ಚಿದರು ಅಲ್ಲದೇ ಈ ಸಾವು ಅನುಮಾನಾಸ್ಪದ ಎಂದು ಮೆಟ್ರೋಪಾಲಿಟನ್ ಪೊಲೀಸರು ತಿಳಿಸಿದ್ದಾರೆ.
1 Comment
Pingback: relaxing