ಬೆಂಗಳೂರು, ಫೆ 22: ಶಾಲೆ- ಕಾಲೇಜ್ಗಳಿಂದ 100 ಮೀ. ವ್ಯಾಪ್ತಿಯಲ್ಲಿ ಸಿಗರೇಟು ಮಾರಾಟ ಮಾಡುವವರಿಗೆ 1,000 ರೂ. ದಂಡ ವಿಧಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿಂದು ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿಧೇಯಕ ಅಂಗೀಕರಿಸಲಾಯಿತು.
ಸದನದಲ್ಲಿ ಈ ಕುರಿತು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಿಗರೇಟು ಮಾರಾಟದ ವಯೋಮಿತಿ 18 ವರ್ಷದಿಂದ 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಶಾಲೆಗಳಿಂದ 100 ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟ ಹಾಗೂ ಸಿಗರೇಟ್ ಸೇದುವಂತಿಲ್ಲ. ಇದನ್ನು ಮೀರಿ ಮಾರಾಟ ಮಾಡುವವರಿಗೆ ದಂಡದ ಪ್ರಮಾಣ 100 ರೂ. ನಿಂದ 1000 ರೂ. ಗೆ ಏರಿಕೆ ಮಾಡಿದ್ದೇವೆ ಎಂದರು.