ಶ್ರೀನಗರ, ಸೆ.20 : ಬಿಎಸ್ಎಫ್ ಯೋಧರನ್ನು ಹೊತ್ತೊಯ್ಯುತ್ತಿದ್ದ ಬಸ್ 40 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದು, 3 ಬಿಎಫ್ಎಸ್ ಯೋಧರು ಮೃತಪಟ್ಟು, 28 ಮಂದಿ ಗಾಯಗೊಂಡ ಘಟನೆ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ವಾಟರ್ಹೇಲ್ ಪ್ರದೇಶದಲ್ಲಿ ನಡೆದಿದೆ.
2ನೇ ಹಂತದ ಚುನಾವಣಾ ನಿಯೋಜನೆಗಾಗಿ ತೆರಳುತ್ತಿದ್ದ ಸಂದರ್ಭ ಬಸ್ ಅಪಘಾತಕ್ಕೀಡಾಗಿದೆ. ಬಸ್ಸಿನಲ್ಲಿ ಸುಮಾರು 35 ಯೋಧರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಗೊಂಡ ಯೋಧರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ಆಗಮಿಸಿದೆ.