ಮಂಗಳೂರು,ಜು. 19: ಸ್ಕೂಲ್ ಲೀಡರ್ ಕನ್ನಡ ಚಲನಚಿತ್ರವು 50ನೇ ದಿನದ ಸಂಭ್ರಮಾಚರಣೆಯನ್ನು ಶುಕ್ರವಾರ ಸಿಟಿ ಸೆಂಟರ್ ಮಾಲ್ ನ ಭಾರತ್ ಸಿನೆಮಾಸ್ ನಲ್ಲಿ ನಡೆಸಿತು.
ಸಿಟಿ ಸೆಂಟರ್ ಮಾಲ್ ನ ಭಾರತ್ ಸಿನೆಮಾಸ್ ನಲ್ಲಿ ನಡೆದ 50ನೇ ದಿನದ ಸಂಭ್ರಮಾಚರಣೆಯ ಕಾರ್ಯಕ್ರಮದಲ್ಲಿ ನಿರ್ಮಾಪಕ ಸತ್ಯೇಂದ್ರ ಪೈ, ತುಳು ಚಲನಚಿತ್ರ ನಿರ್ದೇಶಕ ದೇವದಾಸ್ ಕಾಪಿಕಾಡ್, ಚಿತ್ರದ ನಿರ್ದೇಶಕ ರಜಾಕ್ ಪುತ್ತೂರು ಮತ್ತಿತರರು ಮಾತಾನಾಡಿದರು. ಈ ಸಂದರ್ಭದಲ್ಲಿ ನಿವೃತ್ತ ಅಧ್ಯಾಪಕರಿಗೆ ಸಿನೆಮಾ ಪ್ರದರ್ಶನ ಏರ್ಪಡಿಸಿ, ಗೌರವಿಸ ಲಾಯಿತು.
ಸನ್ ಮ್ಯಾಟ್ರಿಕ್ಸ್ ಬ್ಯಾನರಿನಲ್ಲಿ ತಯಾರಾಗಿರುವ ಕೆ.ಸತ್ಯೇಂದ್ರ ಪೈ ನಿರ್ಮಾಣದ ಸ್ಕೂಲ್ ಲೀಡರ್ ಕನ್ನಡ ಚಲನಚಿತ್ರದಲ್ಲಿ ರಝಾಕ್ ಪುತ್ತೂರು ಇವರು ಚಿತ್ರ ದ ಕಥೆ, ಚಿತ್ರ ಕಥೆ, ಸಂಭಾಷಣೆ ಜೊತೆಗೆ ಹಾಡುಗಳನ್ನು ಬರೆದು ನಿರ್ದೇಶನ ಮಾಡಿದ್ದಾರೆ.ಚಿತ್ರದಲ್ಲಿ ಭೋಜರಾಜ ವಾಮಂಜೂರು, ಅರವಿಂದ ಬೋಳಾರ್, ದೀಪಕ್ ರೈ, ರಮೇಶ್ ಭಟ್ ನಟಿಸಿದ್ದಾರೆ.
ಈ ಸಂದರ್ಭದಲ್ಲಿ ಸಹ ನಿರ್ಮಾಪಕ ಅಕ್ಷತ್ ವಿಟ್ಲ, ನಾಗೇಶ್ ಕಾಮತ್, ಯು. ವಿಶ್ವನಾಥ ಕುಯಿಲಾಡಿ ಸುರೇಶ್ ನಾಯಕ್, ಪೂರ್ಣಿಮಾ ಸುರೇಶ್, ಡಿಡಿಪಿಐ ಲೋಕೇಶ್, ಜಿಲ್ಲಾ ಸರ್ಜನ್ ಡಾ| ಅಶೋಕ್, ಶ್ರೀಪಾದ ಹೆಗ್ಡೆ ,ಚಿತ್ರತಂಡದ ಕಲಾವಿದರು, ತಂತ್ರಜ್ಞರು ಉಪಸ್ಥಿತರಿದ್ದರು.