ಮಂಗಳೂರು,ಜ.31: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್ ಫಿಲಂಸ್ ಹರಿಪ್ರಸಾದ್ ರೈಯವರ ಸಹಯೋಗದಲ್ಲಿ ಆನಂದ್ ಎನ್. ಕುಂಪಲರವರ ನಿರ್ಮಾಣದಲ್ಲಿ ತಯಾರಾದ ‘ಮಿಡ್ಸ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಶುಕ್ರವಾರ ಭಾರತ್ ಮಾಲ್ ನಲ್ಲಿ ಬಿಡುಗಡೆಯಾಯಿತು.
ಪ್ರಾಸ್ತಾವಿಕವಾಗಿ ಮಾತಾನಾಡಿದ ದ ನಟ ವಿನೀತ್ ಕುಮಾರ್ ಅವರು, ರಾಜ್ ಸೌಂಡ್ಸ್ ಆಂಡ್ ಲೈಟ್ಸ್ ಸಿನಿಮಾ ತಂಡ ಕುಟುಂಬ ಸಮೇತರಾಗಿ ಕೂತು ನೋಡುವಂತಹ ‘ಮಿಡಲ್ ಕ್ಲಾಸ್ ಫ್ಯಾಮಿಲಿ’ ಸಿನಿಮಾ ನಿರ್ಮಿಸಿದೆ. ನೀವು ಈ ಬಿಗ್ ಬಜೆಟ್ ಸಿನಿಮಾವನ್ನು ನೋಡಿ ಪ್ರೊತ್ಸಾಹಿಸಿ, ಈ ಚಿತ್ರವನ್ನು ಗೆಲ್ಲಿಸಿ ಎಂದರು.
ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಮಾತಾಡಿ, ತುಳುಭಾಷೆ ಬೆಳವಣಿಗೆಗೆ ತುಳು ಸಿನಿಮಾಗಳು ಬಹಳಷ್ಟು ಸಹಕಾರ ನೀಡುತ್ತಿವೆ. ತುಳು ಸಿನಿಮಾಗಳನ್ನು ನೋಡಿ ಬೆಂಬಳಿಸಿ, ಮಿಡಲ್ ಕ್ಲಾಸ್ ಫ್ಯಾಮಿಲಿ ಸಿನಿಮಾವನ್ನು ನೋಡಿ ಪ್ರೊತ್ಸಾಹಿಸಿ ಎಂದು ಹೇಳಿದರು.
ರೋಹನ್ ಮೊತೆರೊ ಮಾತನಾಡಿ ಮಿಡ್ಸ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾಗಳನ್ನು ನೋಡಿ ಪ್ರೊತ್ಸಾಹಿಸಿ, ಈ ಚಲನ ಚಿತ್ರ ವೀಕ್ಷಿಸುವ ಪ್ರೇಕ್ಷಕರಿಗೆ ಎರಡು ವಾರದ ಒಳಗೆ ಟಿಕೆಟ್ ದಾಖಲೆ ತೋರಿಸುವವರಿಗೆ ರೋಹನ್ ಕಾರ್ಪೊರೇ ಷನ್ ಪ್ರೊಜೆಕ್ಟ್ ಬುಕ್ ಮಾಡುವವರಿಗೆ ಶೇ 10 ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದರು.
ಸಮಾರಂಭದಲ್ಲಿ ರೋಹನ್ ಕಾರ್ಪೊರೇಶನ್ ಸಂಸ್ಥೆಯ ಆಡಳಿತ ನಿರ್ದೇಶಕ ರೋಹನ್ ಮೊತೇರೊ, ಶಾಸಕ ವೇದವ್ಯಾಸ ಕಾಮತ್, ಮೇಯರ್ ಮನೋಜ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಗಟ್ಟಿ, ಮಾಜಿ ಸಚಿವ ನಾಗರಾಜ ಶೆಟ್ಟಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಆರ್. ಪದ್ಮರಾಜ್, ಚಿತ್ರದ ದುಬಾಯಿಯ ಪುಮೋಟರ್ ಮನೀಶಾ ಸದಾಶಿವ ಶೆಟ್ಟಿ, ಮಸಾಲ ಬೈ ಸೋಶಿಯಲ್ ಸಂಸ್ಥೆಯ ಮಾಲಕ ಶರತ್ ಶೆಟ್ಟಿ, ವಿ.ಕೆ. ಫರ್ನಿಚರ್ ಮಾಲಕ ವಿಠಲ ಕುಲಾಲ್, ಸುಮನ್ ಕದ್ರಿ, ನಮ್ಮ ಕುಡ್ಲ ಸಂಸ್ಥೆಯ ನಿರ್ದೇಶಕ ಲೀಲಾಕ್ಷ ಬಿ. ಕರ್ಕೇರ, ಸಿನಿಮಾದ ನಿರ್ದೇಶಕ ರಾಹುಲ್ ಅಮೀನ್ ಮತ್ತು ತಂಡದ ಸದಸ್ಯರು ಉಪಸ್ಥಿತರಿದ್ದರು.
ಈ ಸಿನಿಮಾದಲ್ಲಿ ವಿನೀತ್ ಕುಮಾರ್ ನಾಯಕ ನಟನಾಗಿ, ಸಮತಾ ಅಮೀನ್ ನಾಯಕಿಯಾಗಿ ಹಾಗೂ ತುಳು ಚಿತ್ರರಂಗದ ಮೇರು ಕಲಾವಿದರಾದ ನವೀನ್ ಡಿ.ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ಚೈತ್ರಾ ಶೆಟ್ಟಿ (ಚಿಂಪು), ಪ್ರಸನ್ನ ಶೆಟ್ಟಿ, ಬೈಲೂರು, ಉಮೇಶ್ ಮಿಜಾರ್, ಸಂದೀಪ್ ಶೆಟ್ಟಿ, ಮಾಣಿಬೆಟ್ಟು, ಮೈಮ್ ರಾಮದಾಸ್, ರೂಪ ವರ್ಕಾಡಿ, ರವಿ ರಾಮಕುಂಜ, ಶೋಭಾ ರೈ, ಶರಣ್ ಚಿಲಿಂಬಿ, ಸಾಹಿಲ್ ರೈ ಹಾಗೂ ಗೌರವ ಪಾತ್ರದಲ್ಲಿ ನವನಿಲ್ ಶೆಟ್ಟಿ, ಕದ್ರಿ ಅಭಿನಯಿಸಿದ್ದಾರೆ. ಸೃಜನ್ ಕುಮಾರ್ ತೋನ್ಸ್ ಸಂಗೀತ ನೀಡಿದ್ದಾರೆ. ಛಾಯಾಗ್ರಾಹಕರಾಗಿ ವಿಷ್ಣು ಪ್ರಸಾದ್ ಪಿ. ಸಂಕಲನ ವಿಶಾಲ್ ದೇವಾಡಿಗ, ಡಿ.ಐ. ಮತ್ತು ವರ್ಣ ಪುಜ್ವಲ್ ಸುವರ್ಣ, ವಸ್ತ್ರ ವಿನ್ಯಾಸ ವರ್ಷ ಆಚಾರ್ಯ, ಡಿಜಿಟಲ್ ಮಾರ್ಕೆಟಿಂಗ್ ಆಯುಷ್ಮಾನ್ ಹಾಗೂ ನವೀನ್ ಕುಮಾರ್ ಶೆಟ್ಟಿ ಮತ್ತು ವಿನಾಯಕ ಅಚಾರ್ಯ ನೃತ್ಯ ಸಂಯೋಜಿಸಿದ್ದಾರೆ.