ಕಾಪು,ಫೆ.06 : ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸಾನಿಧ್ಯಾಭಿವೃದ್ಧಿ, ಲೋಕಕಲ್ಯಾರ್ಥವಾಗಿ ಹಮ್ಮಿಕೊಂಡಿರುವ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ಮಂಗಳವಾರ ನವಚಂಡೀಯಾಗ ಪೂರ್ಣಾಹುತಿಯೊಂದಿಗೆ ಸಂಪನ್ನಗೊಂಡಿತು.
ದೇವಸ್ಥಾನದ ಪ್ರಧಾನ ತಂತ್ರಿ ವಿದ್ವಾನ್ ಕೊರಂಗ್ರಪಾಡಿ ಕುಮಾರಗುರು ನೇತೃತ್ವದಲ್ಲಿ, ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯಾ ಉಪಸ್ಥಿತಿಯಲ್ಲಿ ನವಚಂಡೀಯಾಗ ಆರಂಭಗೊಂಡು, ಕಲ್ಲೋಕ್ತ ಪೂಜೆ, ಮಹಾ ಮಂಗಳಾರತಿ, ಪೂರ್ಣಾಹುತಿ, ಮಹಾಪ್ರಸಾದ ವಿತರಣೆ ನಡೆಯಿತು.
ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ಅಮ್ಮನ 9 ಹೆಸರುಗಳೊಂದಿಗೆ ನವದುರ್ಗಾ ಲೇಖನ ಬರೆದು ಶಿಲಾ ಸೇವೆ ಸಹಿತವಾಗಿ ದೇವಸ್ಥಾನಕ್ಕೆ ತಂದು ಸಮರ್ಪಿಸಿದ ಎಲ್ಲೆಡೆಯ ಹೆಚ್ಚಿನ ಸಂಖ್ಯೆಯ ಭಕ್ತರು ನವಚಂಡೀಯಾಗದ ಸಂಕಲ್ಪದಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ದೀಪ ಪ್ರಜ್ವಲನೆಗೈದರು. ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ, ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ದಂಪತಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ ದಂಪತಿ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್ ದಂಪತಿ ನವಚಂಡೀಯಾಗದ ಸಂಕಲ್ಪದಲ್ಲಿ ಪಾಲ್ಗೊಂಡರು.
ಬ್ರ,ಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಅವರು ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ನಂತರ ಮಾತಾಡಿ ಫೆ. 25ರಿಂದ ಮಾರ್ಚ್ 5ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು, ವಿವಿಧ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿವೆ. ಸಾಂಸ್ಕೃತಿಕ ಕಲಾ ತಂಡಗಳು, ರಾಜ್ಯ, ರಾಷ್ಟ್ರಮಟ್ಟದ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ತಹಶೀಲ್ದಾರ್ ಪ್ರತಿಭಾ ಆರ್, ರಜತರಥ ದಾನಿ ಆನಂದ ಶೆಟ್ಟಿ ಮುಂಬೈ, ಪ್ರಭಾಕರ ಶೆಟ್ಟಿ ಮಂಡಗದ್ದೆ, ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಉದಯ ಸುಂದರ್ ಶೆಟ್ಟಿ, ಮುಂಬೈ ಸಮಿತಿ ಉಪಾಧ್ಯಕ್ಷ ಕೃಷ್ಣ ವೈ. ಶೆಟ್ಟಿ, ಪುಣೆ ಸಮಿತಿ ಅಧ್ಯಕ್ಷ ಇನ್ನಾ ಸಂತೋಷ್ ಶೆಟ್ಟಿ ಪುಣೆ, ಅಂತರರಾಷ್ಟ್ರೀಯ ಸಮಿತಿ ಅಧ್ಯಕ್ಷ ಮಲ್ಲಾರು ಶಶಿಧರ ಶೆಟ್ಟಿ ಮಸ್ಕತ್, ಮಲ್ಲಾರು ದಿವಾಕರ ಶೆಟ್ಟಿ ಮಸ್ಕತ್, ಸಮಿತಿ ಉಪಾಧ್ಯಕ್ಷರಾದ ಮನೋಹರ ಎಸ್. ಶೆಟ್ಟಿ, ಮಾಧವ ಆರ್. ಪಾಲನ್, ಕಾಪು ದಿವಾಕರ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ ಬೆಳಪು, ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕಾರ್ಯ ನಿರ್ವಹಣಾಧಿಕಾರಿ ಕೆ. ರವಿಕಿರಣ್, ನವದುರ್ಗಾ ಲೇಖನ ಯಜ್ಞ ಸಮಿತಿ ಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಬಾಲಾಜಿ, ಕಾರ್ಯಾಧ್ಯಕ್ಷರಾದ ಕೃಷ್ಣ ಪ್ರಸಾದ್ ಅಡ್ಯಂತಾಯ, ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ಉಪಾಧ್ಯಕ್ಷರಾದ ಹರಿಯಪ್ಪ ಕೋಟ್ಯಾನ್, ಅಶೋಕ್ ಕುಮಾರ್ ಶೆಟ್ಟಿ, ಖಜಾಂಚಿ ಕೆ. ವಿಶ್ವನಾಥ್, ಸಂಘಟನಾ ಕಾರ್ಯದರ್ಶಿ ಸಂದೀಪ್ ಕುಮಾರ್ ಮಂಜ,ಸಂಚಾಲಕ ಸುವರ್ಧನ ನಾಯಕ್, ಮಹಿಳಾ ಮುಖ್ಯ ಸಂಚಾಲಕಿ ಗೀತಾಂಜಲಿ ಎಂ. ಸುವರ್ಣ, ಮಹಿಳಾ ಪ್ರಧಾನ ಸಂಚಾಲಕಿ ಸಾವಿತ್ರಿ ಗಣೇಶ್, ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಯ, ಸದಸ್ಯರು ಉಪಸ್ಥಿತರಿದ್ದರು. ದಾಮೋದರ ಶರ್ಮ ನಿರ್ವಹಿಸಿದರು. ಯೋಗೀಶ್ ಶೆಟ್ಟಿ ಬಾಲಾಜಿ ವಂದಿಸಿದರು.