ಮಂಗಳೂರು, ಫೆ.13 : ನಗರ ಸಂಚಾರ ಪೊಲೀಸ್ ಮತ್ತು ಸಾರಿಗೆ ಇಲಾಖೆಯ ವತಿಯಿಂದ ಫಿಜಾ ಬೈ ನೆಕ್ಸಸ್ ಮಾಲ್‌ನಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ -2025 ಗುರುವಾರ, ಫೆ. 13 ರಂದು ನಡೆಯಿತು.
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಉದ್ಘಾಟಿಸಿ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತ ಅನುಪಮ ಅಗರ್ವಾಲ್ ಅವರು, ಪ್ರತಿ ವರ್ಷ ರಸ್ತೆ ಸುರಕ್ಷತಾ ಮಾಸಾಚರಣೆ ಮಾಡಲಾಗುತ್ತದೆ. ರಸ್ತೆ ಅಪಘಾತದಿಂದ ಆಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ. ರಸ್ತೆ ಅಪಘಾತ ತಡೆಗಟ್ಟುವ ಬಗ್ಗೆ ಮಾಹಿತಿಯನ್ನು ಈ ಸಂದರ್ಭದಲ್ಲಿ ನೀಡಲಾಗುತ್ತದೆ. ವಾಹನ ಚಲಾಯಿಸುವಾಗ ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ಅಪಘಾತವನ್ನು ಕಡಿಮೆ ಮಾಡಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅರವಿಂದ್ ಬೋಳಾರ್ ಅವರು, ಹೆಚ್ಚಿನ ರಸ್ತೆ ಅಪಘಾತಗಳು ವಾಹನ ಚಾಲಕರ ನಿರ್ಲಕ್ಷ್ಯದಿಂದ ಸಂಭವಿಸುತ್ತವೆ. ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ಅಪಘಾತವನ್ನು ತಪ್ಪಿಸಬಹುದು ಎಂದು ಅಭಿಪ್ರಾಯ ಪಟ್ಟರು.
ಕಾರ್ಯಕ್ರಮದಲ್ಲಿ ಡಿಸಿಪಿ (ಅಪರಾಧ ಮತ್ತು ಸಂಚಾರ) ರವಿಶಂಕರ್, ಡಿಸಿಪಿ ಸಿದ್ಧಾರ್ಥ್ ಗೋಯಲ್, ಆರ್ಟಿಒ ಆಯುಕ್ತ ಶ್ರೀಧರ್ ಕೆ. ಮಲ್ಲಾದ್, ಫಿಜಾ ಬೈ ನೆಕ್ಸಸ್ ಮಾಲ್ನ ಸಹಾಯಕ ಪ್ರಧಾನ ವ್ಯವಸ್ಥಾಪಕ ಸುನಿಲ್ ಕೆ. ಎಸ್ ಮತ್ತು ಇತರರು ಉಪಸ್ಥಿತರಿದ್ದರು