ಕಾಸರಗೋಡು, ಮಾ.17 : ಬೈಕ್ ಮತ್ತು ಲಾರಿ ನಡುವೆ ಉಂಟಾದ ಅಪಘಾತ ಸಂಭವಿಸಿ
ಬೈಕ್ ಸವಾರ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಶಿರಿಯ ಪೆಟ್ರೋಲ್ ಬಂಕ್ ಮುಂಭಾಗ ದಲ್ಲಿ ನಡೆದಿದೆ.
ಮೃತರನ್ನು ಕುಂಬಳೆ ಕಣ್ಣೂರಿನ ತ್ಯಾಂಪಣ್ಣ ಪೂಜಾರಿ ರವರ ಪುತ್ರ ರವಿಚಂದ್ರ (35) ಎಂದು ಗುರುತಿಸಲಾಗಿದೆ.
ಬೈಕ್ ಕುಂಬಳೆ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ರವಿಚಂದ್ರ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.