ನವದೆಹಲಿ, ಏ. 01 : ಇಲ್ಲಿನ ಝಂಡೇವಾಲನ್ ಪ್ರದೇಶದ ಅನಾರ್ಕಲಿ ಕಟ್ಟಡ ಹಾಗೂ ಡಿಡಿಎ ಶಾಪಿಂಗ್ ಕಾಂಪ್ಲೆಕ್ಸ್ನಲ್ಲಿ ಮಂಗಳವಾರ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.ಘಟನಾ ಸ್ಥಳಕ್ಕೆ 15 ಅಗ್ನಿಶಾಮಕ ದಳ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸ್ಥಳದಲ್ಲಿ ನಿಲ್ಲಿಸಿದ್ದ ಹಲವಾರು ಕಾರುಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಬೆಂಕಿ ಅವಘಡದಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ.