ಮಂಗಳೂರು, ಏ.4 : ಕುದ್ರೋಳಿ ಭಗವತಿ ಕ್ಷೇತ್ರದಲ್ಲಿ ಈ ಸಾಲಿನ ನಡಾವಳಿ ಉತ್ಸವವು ದಿನಾಂಕ ಎಪ್ರಿಲ್ 9ರಿಂದ 11ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಹಳ ವಿಜೃಂಭಣೆಯಿಂದ ಜರಗಲಿದೆ ಎಂದು ಕ್ಷೇತ್ರದ ಅಧ್ಯಕ್ಷ ಗಣೇಶ್ ಕುಂಟಲ್ಪಾಡಿ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಉತ್ಸವದ ಸಂದರ್ಭದಲ್ಲಿ ಶ್ರೀ ಮಾತೆಯರ ಭವ್ಯ ಶೋಭಾಯಾತ್ರೆ ಹಾಗೂ ಪಾರಂಪರಿಕ ಪವಿತ್ರ ಕೆಂಡ ಸೇವೆ ನಡೆಯಲಿದೆ. ಪ್ರತೀ ದಿನ ಮಧ್ಯಾಹ್ನ ಹಾಗೂ ರಾತ್ರಿ ಮಹಾಪೂಜೆಯ ಬಳಿಕ ಅನ್ನ ಸಂತರ್ಪಣಾ ಸೇವೆ ಜರಗಲಿದೆ ಎಂದರು.
ವೇದಿಕೆಯಲ್ಲಿ ವಿಶ್ವನಾಥ್ ಕುಡುಪು, ಸುಧೀರ್ ಬಿ.ಜೆಪ್ಪು, ಲೋಕೇಶ್ ಬೋಳಾರ್,ಸ್ರಜನ್ ದಾಸ್, ಮೋಹನ್, ಪುರುಷ ಸಾಲಿಯಾನ್, ರವೀಂದ್ರ ಕೊಡಿಯಾಲ್ ಬೈಲ್, ಉಷಾ ಪ್ರಭಾಕರ್, ಆಶಾ ಚಂದ್ರಮೋಹನ್, ಪುರುಷ ಸಾಲಿಯಾನ್ ಮತ್ತಿತರರು ಉಪಸ್ಥಿತರಿದ್ದರು.