ಸುರತ್ಕಲ್,ಏ.19 : ಕಾಟಿಪಳ್ಳ ಗಣೇಶಪುರದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸುರತ್ಕಲ್ ಜಂಕ್ಷನನಿಂದ ಶ್ರೀ ಕ್ಷೇತ್ರ ಗಣೇಶಪುರ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ಬ್ರಹ್ಮರಥ ಸಮರ್ಪಣಾ ಭವ್ಯ ಶೋಭಾಯಾತ್ರೆ ಏ.12 ಶನಿವಾರ ನಡೆಯಿತು.
ಈ ಸಂದರ್ಭದಲ್ಲಿ,ಶ್ರೀ ಕ್ಷೇತ್ರ ಗಣೇಶಪುರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಮತ್ತು ಸರ್ವಸದಸ್ಯರು, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರು ಮತ್ತು ಸರ್ವಸದಸ್ಯರು, ಕಾರ್ಯನಿರ್ವಹಣಾಧಿಕಾರಿ , ಗ್ರಾಮಸ್ಥರು ಭಕ್ತರು ಮತ್ತಿತರರು ಉಪಸ್ಥಿತರಿದ್ದರು.