ಬೆಳ್ತಂಗಡಿ, ಎ. 21 : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನೂತನ ಕಲ್ಯಾಣಮಂಟಪ ಗಳಾದ ಶ್ರೀ ಉಮಾಮಹೇಶ್ವರ, ಶ್ರೀ ಶಿವ ಪಾರ್ವತಿ, ಶ್ರೀ ಗೌರೀಶಂಕರ ಸಮುಚ್ಚಯವನ್ನು ಎ.20, ಭಾನುವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಧರ್ಮಾಧಿಕಾರಿಯಾದ ಡಾ| ಡಿ.ವೀರೇಂದ್ರ ಹೆಗ್ಗಡೆ ಯವರ ಧಾರ್ಮಿಕ, ಶಿಕ್ಷಣ, ಆರೋಗ್ಯ ಸಹಿತ ಬಹುಮುಖಿ ಸೇವೆ ದೇಶಕ್ಕೆ ಮಾದರಿ. ಧರ್ಮಸ್ಥಳ ಕ್ಷೇತ್ರದಲ್ಲಿ ಮೂರು ಕಲ್ಯಾಣ ಮಂಟಪ ಉದ್ಘಾಟಿಸುವ ಭಾಗ್ಯ ನನಗೆ ದೊರೆತಿರುವುದು ಧನ್ಯತೆಯ ಭಾವ ಮೂಡಿಸಿದೆ ಎಂದರು.
ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಯವರು ಮಾತನಾಡಿ, ದೇಗುಲದ ಹಿಂದಿನ ಹಳೆಯ ಕಲ್ಯಾಣ ಮಂಟತೆರವುಗೊಳಿಸಿ, ಈಗ ಹೊಸ ಕಲ್ಯಾಣ ಮಂಟಪಗಳ ಸಮುಚ್ಚಯವನ್ನು ನಿರ್ಮಿಸಲಾಗಿದೆ. ಭಕ್ತರ ಅನುಕೂಲಕ್ಕಾಗಿ ನೂತನ ಕಲ್ಯಾಣಮಂಟಪಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ, , ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಾಜಿ ವಿಧಾನಪರಿಷತ್ ಸದಸ್ಯ ಕೆ .ಹರೀಶ್ ಕುಮಾರ್, ಹೇಮಾವತಿ, ವೀ. ಹೆಗ್ಗಡೆ, ಶ್ರದ್ಧಾ ಅಮಿತ್, ಡಿ.ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಶ್ರೇಯಸ್ ಕುಮಾರ್, ಡಿ. ನಿಶ್ಚಲ್ ಕುಮಾರ್ ಉಪಸ್ಥಿತರಿದ್ದರು.
ಕ್ಷೇತ್ರದ ವತಿಯಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಗೌರವಿಸಿದರು. ಕಲ್ಯಾಣ ಮಂಟಪದ ಎಂಜಿನಿಯರ್ ಮಂಜು ಕಿರ್ತನ, ಕಾಮಗಾರಿ ವ್ಯವಸ್ಥಾಪಕ ಯಶೋಧರ ಮತ್ತು ಕಟ್ಟಡ ಮೇಲ್ವಿಚಾರಕ ನಿಖಿಲ್ ಅವರನ್ನು ಗೌರವಿಸಲಾಯಿತು.ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ -ದರ್ಶಿ ಡಿ.ಹರ್ಷಂದ್ರಕುಮಾರ್ ಸ್ವಾಗತಿಸಿ – ದರು. ಎಂಜಿನಿಯರ್ ಯಶೋಧರ ವಂದಿಸಿದರು.