ಮಂಗಳೂರು, ಎ.24 : ನವೋದಯ ಗ್ರಾಮ ವಿಕಾಸ ಚಾರಿ ಟೇಬಲ್ ಟ್ರಸ್ಟ್ ಮತ್ತು ನವೋದಯ ಸ್ವಸಹಾಯ ಗುಂಪುಗಳ 25ನೇ ವರ್ಷಾಚರಣೆಯ ‘ರಜತ ಸಂಭ್ರಮ’ ಮೇ10 ರಂದು ಬಂಗಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ ಎಂದು ಟ್ರಸ್ಟ್ ಸಂಸ್ಥಾಪಕ ಡಾ|ಎಂ.ಎನ್. ರಾಜೇಂದ್ರ ಕುಮಾರ್ ಅವರು ಎಸ್‌ಸಿಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನವೋದಯ ಸ್ವಸಹಾಯ ಗುಂಪುಗಳ 25ನೇ ವರ್ಷಾಚರಣೆಯ ರಜತ ಸಂಭ್ರಮ ಕುರಿತ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಗೊಳಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ|ಎಂ.ಎನ್. ರಾಜೇಂದ್ರ ಕುಮಾರ್ ಅವರು, ಮೇ.10 ರಂದು ನಡೆಯುವ ಸಮಾವೇಶದಲ್ಲಿ 1.5 ಲಕ್ಷ ಮಹಿಳಾ ಸದಸ್ಯೆಯರು ಸಮವಸ್ತ್ರ ಧರಿಸಿ ಭಾಗವಹಿಸುವರು, ಇಡೀ ದೇಶಕ್ಕೆ ಮಹಿಳಾ ಸ್ವಾವಲಂಬನೆಯ ವಿಷಯದಲ್ಲಿ ಸಮಾವೇಶದ ಮೂಲಕ ಸಂದೇಶ ನೀಡಲಾಗುವುದು ಎಂದರು.
ಮೇ.10 ರ ಬೆಳಗ್ಗೆ 10ಕ್ಕೆ ಬಂಗಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾವೇಶದ ಉದ್ಘಾಟನೆ ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಮಹಾರಾಷ್ಟ್ರ ಮುಖ್ಯ ಮಂತ್ರಿ ದೇವೇಂದ್ರ ಫಡ್ನವಿಸ್ ನವೋ ದಯ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಸವಲತ್ತು ವಿತರಿಸುವರು. ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ‘ಸಂತೃಪ್ತಿ ಸ್ಮರಣಸಂಚಿಕೆ ಬಿಡುಗಡೆಗೊಳಿಸುವರು. ಸಹಕಾರಿ ಧ್ವಜಾರೋಹಣವನ್ನು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ನೆರವೇರಿ ಸಲಿದ್ದು, ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಅತ್ಯುತ್ತಮ ನವೋದಯ ಗುಂಪುಗಳಿಗೆ ಪ್ರಶಸ್ತಿ ಪ್ರದಾನಿಸುವರು. ಡಾ|ಎಂ.ಎನ್.ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸುವರು. ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ|ಡಿ.ವೀರೇಂದ್ರ ಹೆಗ್ಗಡೆ ಹಾಗೂ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ಅತಿಥಿಗಳಾಗಿ ಸಚಿವರಾದ ಕೆ.ಎನ್.ರಾಜಣ್ಣ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ವರ್,ಆರ್.ಬಿ.ತಿಮ್ಮಾಪುರ, ಶಿವಾನಂದ ಪಾಟೀಲ, ಮಾಜಿ ಸಿಎಂ ಡಾ|ಎಂ. ವೀರಪ್ಪ ಮೊಯ್ಲಿ, ಸಂಸದ ಕ್ಯಾ.ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ ಮತ್ತಿತರರು ಭಾಗವಹಿಸುವರು ಎಂದು ಅವರು ಹೇಳಿದರು.
ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಬ್ಯಾಂಕ್ ನಿರ್ದೇಶಕರಾದ ಭಾಸ್ಕರ್.ಎಸ್. ಕೋಟ್ಯಾನ್, ದೇವಿ ಪ್ರಸಾದ್ ಶೆಟ್ಟಿಬೆಳಪು, ಶಶಿಕುಮಾರ್ ರೈ ಬಿ., ಕೆ ಜೈರಾಜ್ ಬಿ. ರೈ, ಮೋನಪ್ಪಶೆಟ್ಟಿ ಎಕ್ಕಾರು, ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ, ನವೋದಯ ಟ್ರಸ್ಟಿಗಳಾದ ಮೇಘರಾಜ್ ಆರ್. ಜೈನ್, ಸುನಿಲ್ ಕುಮಾರ್ ಬಜಗೋಳಿ, ಜಯಪ್ರಕಾಶ್ ತುಂಬೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಉಪಸ್ಥಿತರಿದ್ದರು.