ಛತ್ತೀಸ್ಗಢ, ಮೇ. 04 : ವ್ಯಕ್ತಿವೊಬ್ಬ ಸ್ಕೂಟರ್ ಸ್ಟಾರ್ಟ್ ಮಾಡಲು ಪ್ರಯತ್ನಿಸುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಅಂಬಿಕಾಪುರದಲ್ಲಿ ನಡೆದಿದೆ. ಶುಕ್ರವಾರ ಸಂಜೆ ಸಂಗಮ್ ಚೌಕ್‌ನಲ್ಲಿ ಈ ಘಟನೆ ನಡೆದಿದ್ದು, ಸಮೀಪದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇಂದ್ರಜಿತ್ ಸಿಂಗ್ ಬಾಬ್ರಾ (35 ) ಎಂಬವರು ಮೃತಪಟ್ಟ ವ್ಯಕ್ತಿ. .ಇಂದ್ರಜಿತ್ ಸಿಂಗ್ ಅವರು ತನ್ನ ವಾಹನವನ್ನು ಪ್ರಾರಂಭಿಸಲು ಪ್ರಯತ್ನಿಸುವಾಗ ಇದ್ದಕ್ಕಿದ್ದಂತೆ ನೆಲಕ್ಕೆ ಬಿದ್ದು ಮೃತಪಟ್ಟಿದ್ದಾನೆ.