ಮಂಗಳೂರು, ಮೇ. 07 : ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದ ಪ್ರಸಿದ್ದ ಸಂಸ್ಥೆ ರೋಹನ್ ಕಾರ್ಪೊರೇಷನ್ ಸಂಸ್ಥೆಯು ತನ್ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ಸ್ಟಾರ್ ಶಾರುಖಾನ್ ಅವರನ್ನು ಘೋಷಿಸಿದೆ. ರೋಹನ್ ಕಾರ್ಪೊರೇಷನ್ ಸಂಸ್ಥೆಯ ರಾಯಭಾರಿಯಾಗಿ ಶಾರುಖಾನ್ ಅವರು ಸಹಿ ಮಾಡಿದ್ದಾರೆ.
ಕರ್ನಾಟಕದ ಮಂಗಳೂರಿನಲ್ಲಿ ಸ್ಥಾಪನೆಯಾದ ಮತ್ತು ಕೇಂದ್ರಕಚೇರಿ ಹೊಂದಿರುವ, ರೋಹನ್ ಕಾರ್ಪೊರೇಷನ್ ಕಳೆದ ಮೂರು ದಶಕಗಳಿಂದ ಹಿಲ್ ಕ್ರೆಸ್ಟ್, ಹೈ ಕ್ರೆಸ್ಟ್, ರೋಹನ್ ಸಿಟಿ ಮತ್ತು ರೋಹನ್ ಸ್ಕ್ವೇರ್ ಇತ್ಯಾದಿ ಪ್ರಮುಖ ಡೆವಲಪ್‌ಮೆಂಟ್ಗಳೊಂದಿಗೆ ಮಂಗಳೂರಿನ ಆಕಾಶದೆತ್ತರದ ಕಟ್ಟಡಗಳನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಯೋಜನೆಗಳು ಆಧುನಿಕತೆ, ನಾವೀನ್ಯತೆಯಿಂದ ಕೂಡಿವೆ.
ರೋಹನ್ ಕಾರ್ಪೊರೇಷನ್ನ ಸಂಸ್ಥಾಪಕರು ಹಾಗೂ ಅಧ್ಯಕ್ಷರಾದ ಡಾ. ರೋಹನ್ ಮೊಂತೇರೊ ಶಾರುಖ್ ಖಾನ್ ಅವರನ್ನು ಕುರಿತು,ಶಾರುಖ್ ಖಾನ್‌ರನ್ನು ಹೊಂದಿರುವುದು ರೋಹನ್ ಕಾರ್ಪೊರೇಷನ್ ಪಾಲುದಾರಿಕೆಗಿಂತ ಹೆಚ್ಚಿನದ್ದೆಂದು ಪ್ರತಿನಿಧಿಸುತ್ತದೆ- ಇದು ಕನಸು ಹಾಗೂ ಬದ್ಧತೆಯ ಸಮ್ಮಿಲನವಾಗಿದೆ. ಶಾರುಖ್ ಖಾನ್ ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿರುವಂತೆ, ರೋಹನ್ ಕಾರ್ಪೊರೇಷನ್ ಜೀವನವನ್ನು ಮಾರ್ಪಡಿಸುವ ಮೂಲಕ ಸ್ಫೂರ್ತಿ ನೀಡುವ ಆಕಾಂಕ್ಷೆ ಹೊಂದಿದೆ. ಅವರನ್ನು ನಮ್ಮೊಂದಿಗೆ ಹೊಂದುವ ಮೂಲಕ, ನಾವು ಕರ್ನಾಟಕ ಹಾಗೂ ಅದರಾಚೆಗೆ ನಗರ ಜೀವನವನ್ನು ಮರುವ್ಯಾಖ್ಯಾನಿಸುವ ನಮ್ಮ ಭರವಸೆಗೆ ಬದ್ಧರಾಗಿದ್ದೇವೆ ಎಂದು ಹೇಳಿದರು.
ಶಾರುಖ್ ಖಾನ್ ಮಾತನಾಡಿ,, ರೋಹನ್ ಕಾರ್ಪೊರೇಷನ್‌ನೊಂದಿಗೆ ರಾಯಭಾರಿಯಾಗಿ ಕೈಜೋಡಿಸುತ್ತಿರುವುದು ನಿಜಕ್ಕೂ ಸಂತೋಷದ ವಿಷಯ. ರೋಹನ್ ಕಾರ್ಪೊರೇಷನ್ ಸಂಸ್ಟೆಯಿಂದ ನಾಳಿನ ನಗರಗಳನ್ನು ರೂಪಿಸುವ ಅದ್ಭುತ ಪ್ರಯಾಣದಲ್ಲಿ ಭಾಗವಾಗಿರಲು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳಿದರು.