ಕುಂದಾಪುರ, ಮೇ. 07 : ಕಾಂತಾರಾ-2 ಸೆಟ್‌ನಲ್ಲಿದ್ದ ಜೂನಿಯರ್ ಆರ್ಟಿಸ್ಟ್ ಕಪಿಲ್ ಎಂಬವರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಈ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ನಡೆದಿದೆ.
ಕೊಲ್ಲೂರು ಭಾಗದಲ್ಲಿ ಕಾಂತಾರ ಚಾಪ್ಟರ್ 1 ಶೂಟಿಂಗ್ ನಡೆಯುತ್ತಿತ್ತು. ಶೂಟಿಂಗ್ ಮುಗಿಸಿ ಕಪಿಲ್ ಮತ್ತು ತಂಡ ಸೌಪರ್ಣಿಕ ನದಿಗೆ ಈಜಾಡಲು ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿದೆ.