ಮಂಗಳೂರು, ಜೂ. 17 : ನಗರದ ನಂತೂರಿನ ತಾರೆತೋಟ ಬಳಿ ಕಾರೊಂದು ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ, ಸ್ಕಿಡ್ ಆಗಿ ಡಿವೈಡರ್ ಬಡಿದು ಸಂಭವಿಸಿದ ಅಪಘಾತದಲ್ಲಿ ಕೇರಳ ಮೂಲದ ವೈದ್ಯರೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಮೃತರನ್ನು ಕೇರಳದ ಆಲಪ್ಪುಳ ಮೂಲದ ಡಾ. ಮೊಹಮ್ಮದ್ ಅಮಲ್ (29) ಎಂದು ಗುರುತಿಸಲಾಗಿದೆ.
ಫಿಸಿಯೋಥೆರಪಿ ವೈದ್ಯ ಡಾ. ಮೊಹಮ್ಮದ್ ಅಮಲ್ ಅವರು ನಂತೂರಿನಿಂದ ಪಂಪ್‌ವೆಲ್ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ, ಸ್ಕಿಡ್ ಆಗಿ ಡಿವೈಡರ್ ಬಡಿದು ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಕದ್ರಿ ಸಂಚಾರ ಪೊಲೀಸರು ಪ್ರಕರಣ ದಾಖಲಾಗಿದೆ.