ಮಂಗಳೂರು, ಜೂ. 18 : ಆಧ್ಯಾತ್ಮಿಕ ನಾಯಕರೂ ಧಾರ್ಮಿಕ ವಿದ್ವಾಂಸರೂ ಆಗಿದ್ದ ಖಾಝಿ ಅಸ್ಸಯ್ಯಿದ್ ಉಮರುಲ್ ಫಾರೂಕ್ ಆಲ್ ಬುಖಾರಿ ಪೊಸೋಟ್ ತಂಳ್ ಅವರ ಹತ್ತನೇ ಉರೂಸ್ ಹಾಗೂ ಅವರು ಸ್ಥಾಪಿಸಿದ ಮಂಜೇಶ್ವರ ಹೊಸಂಗಡಿ ಮಳ್‌ಹರ್ ವಿದ್ಯಾಸಂಸ್ಥೆಯ ರಜತ ಮಹೋತ್ಸವವು ಜೂ. 19ರಿಂದ 22ರವರೆಗೆ ನಡೆಯಲಿದೆ ಎಂದು ವಿದ್ಯಾಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸಯ್ಯಿದ್ ಜಲಾಲುದ್ದೀನ್ ಬುಖಾರಿ ತಂಙಳ್ ಅವರು ಬುಧವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಜೂ. 19 ಗುರುವಾರ ಸಂಜೆ 4.30ಕ್ಕೆ ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಅಧ್ಯಕ್ಷ ಸಯ್ಯಿದ್ ಆಟಕೋಯ ತಂಳ್ ಕುಂಬೋಲ್ ಉದ್ಘಾಟಿಸಲಿದ್ದು, ಕರ್ನಾಟಕ ಸುನ್ನೀ ಉಲಮಾ ಒಕ್ಕೂಟದ ರಾಜ್ಯಾಧ್ಯಕ್ಷ ಖಾಝಿ ಝೈನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಮಂಜೇಶ್ವರ ಶಾಸಕ ಎಂ.ಕೆ.ಎಂ. ಆಶ್ರಫ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಅವರು ಹೇಳಿದರು.
ಅಂದು ರಾತ್ರಿ 8ಕ್ಕೆ ಸಂಸ್ಥೆಯ ಮುಖ್ಯಸ್ಥ ಸಯ್ಯದ್ ಶಹೀರ್ ಅಲ್ ಬುಖಾರಿ ನೇತೃತ್ವದಲ್ಲಿ ನಡೆಯುವ ಸ್ವಲಾತ್ ಮಜ್ಜಿಸ್‌ನಲ್ಲಿ ಸಯ್ಯದ್ ಜಲಾಲುದ್ದೀನ್ ಸಅದಿ, ಸ್ಟಾಲಿಹ್ ಸಅದಿ ತಳಿಪ್ಪರಂಬ, ಹಂಝ ಕೋಯ ಬಾಖವಿ ಭಾಗವಹಿಸುವರು. ಜೂ. 20ರಂದು ಮಧ್ಯಾಹ್ನದಿಂದ ಆರಂಭಗೊಳ್ಳುವ ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಸಯ್ಯದ್ ಬಾಯಾರ್ ತಂಜಳ್, ಸಯ್ಯದ್ ಕಲ್ಲಕಟ್ಟ ತಂಜಳ್, ಸಯ್ಯದ್ ಪಿ.ಎಸ್.ಎ. ತಂಜಳ್ ಬಾಹಸನ್ ನೇತೃತ್ವ ವಹಿಸುವರು ಎಂದು ಮಳಹರ್ ಕರ್ನಾಟಕ ಪ್ರಚಾರ ಸಮಿತಿಯ ಕಾರ್ಯಾಧ್ಯಕ್ಷ ಕೆ.ಎಂ. ಅಬೂಬಕರ್ ಸಿದ್ದೀಕ್ ಅವರು ತಿಳಿಸಿದರು.
ಜೂ.21 ರಂದು ಅಪರಾಹ್ನ 2 ಗಂಟೆಗೆ ಸಾಮಾಜಿಕ ಸಮಾವೇಶ ಮತ್ತು 7 ಗಂಟೆಗೆ ಸನದುದಾನ ಸಮಾರಂಭ ನಡೆಯಲಿದೆ. ಸಮಸ್ತ ಉಲಮಾ ಒಕ್ಕೂಟದ ಅಧ್ಯಕ್ಷ ರಈಸುಲ್ ಉಲಮಾ ಸುಲೈಮಾನ್ ಮುಸ್ಲಿಯಾರ್ ಪದವಿ ಪ್ರದಾನ ಮಾಡಲಿದ್ದು, ಭಾರತದ ಗ್ರಾಂಡ್ ಮುಸ್ಲಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕರ್ ಮುಸ್ಲಿಯಾರ್ ಘಟಿಕೋತ್ಸವ ಭಾಷಣ ಮಾಡುವರು. ಇದೇ ವೇಳೆ ಸಯ್ಯದ್ ಪೊಸೋಟ್ ತಂಜಳ್ ಅವರು ಕರ್ನಾಟಕದ ಹಾವೇರಿಯಲ್ಲಿ ಸ್ಥಾಪಿಸಿದ ಮುಈನುಸ್ಸುನ್ನ ವಿದ್ಯಾಸಂಸ್ಥೆಯ ವತಿಯಿಂದ ನೀಡಲಾಗುವ ಸಾಧಕ ಪ್ರಶಸ್ತಿಯನ್ನು ಡಾ. ಫಾಝಿಲ್ ರಝಿ ಹಝತ್ ಕಾವಲಕಟ್ಟೆ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಮುಹಮ್ಮದ್ ಸಾಗರ್ ತಿಳಿಸಿದರು.
ಜೂ.22 ರಂದು ಪೂರ್ವಾಹ್ನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಅನ್ನದಾನದೊಂದಿಗೆ ಉರೂಸ್ ಕಾರ್ಯಕ್ರಮ ಸಮಾರೋಪಗೊಳ್ಳಲಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಳಹರ್ ಕರ್ನಾಟಕ ಪ್ರಚಾರ ಸಮಿತಿಯ ಅಧ್ಯಕ್ಷ ಹಾಜಿ ಮುಹಮ್ಮದ್ ಸಾಗರ, ವಿದ್ಯಾಸಂಸ್ಥೆಯ ಮ್ಯಾನೇಜರ್ ನ್ಯಾಯವಾದಿ ಹಸನ್ ಕುಂಞ, ಕರ್ನಾಟಕ ಮುಸ್ಲಿಂ ಜಮಾಅತ್ ಜಿಲ್ಲಾ ಕಾರ್ಯದರ್ಶಿ ರಹೀಂ ಸಅದಿ ಕತಾರ್, ಮಳ್ಹ ಕರ್ನಾಟಕ ಪ್ರಚಾರ ಸಮಿತಿಯ ಕಾರ್ಯದರ್ಶಿ ಅಬೂಸ್ವಾಲಿಹ್ ಗೇರುಕಟ್ಟೆ, ಎಸ್.ಎಸ್.ಎಫ್. ರಾಜ್ಯ ಕಾರ್ಯದರ್ಶಿ ಅಬ್ದುಲ್ ರಶೀದ್ ಮಡಂತ್ಯಾರು ಉಪಸ್ಥಿತರಿದ್ದರು.