ಜೈಪುರ, ಜು. 25 : ಪ್ರಾಥಮಿಕ ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿದು ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲಾವರ್‌ನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ 60ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಲು ರಕ್ಷಣಾ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇನ್ನು ಸ್ಥಳೀಯರು ಅಧಿಕಾರಿಗಳಿಗೆ ಸಹಕಾರ ನೀಡುತ್ತಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಇಂದು ಬೆಳಗ್ಗೆ 8:30ಕ್ಕೆ ಶಾಲೆ ಶುರುವಾದ ವೇಳೆ ದುರಂತ ಸಂಭವಿಸಿದೆ. ಈ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಭಾರೀ ಮಳೆಯ ಕಾರಣ ಮೇಲ್ಛಾವಣಿ ಕುಸಿದಿದೆ ಎಂದು ಹೇಳಲಾಗುತ್ತಿದೆ.