ಕೈರೋ, ಸೆ. 03 : ಸುಡಾನ್ ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಭಾರಿ ಭೂಕುಸಿತ ಸಂಭವಿಸಿ 1,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಭೂಕುಸಿತದಲ್ಲಿ ಇಡೀ ಗ್ರಾಮವೇ ನೆಲಸಮಗೊಂಡಿದೆ.
ಮರ್ರಾ ಪರ್ವತಗಳಲ್ಲಿರುವ ತಾರಾಸಿನ್ ಗ್ರಾಮದಲ್ಲಿ ಕೆಲ ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗಿತ್ತು. ಅದರ ಬೆನ್ನಲ್ಲೇ ಈ ದುರಂತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಮೂವ್ಮೆಂಟ್/ಆರ್ಮಿ ಮಾಹಿತಿ ನೀಡಿದೆ.
ಸುಡಾನ್ ಸೈನ್ಯ ಮತ್ತು ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆಗಳ ನಡುವಿನ ರಕ್ತಸಿಕ್ತ ಅಂತರ್ಯುದ್ಧದಲ್ಲಿ ಸಿಲುಕಿಕೊಂಡಿದೆ ಮಣ್ಣು ಮತ್ತು ಅವಶೇಷಗಳ ಅಡಿಯಲ್ಲಿ ಹೂತುಹೋಗಿರುವವರನ್ನು ಹೊರತೆಗೆಯಲು ಸಹಾಯ ಮಾಡುವಂತೆ ವಿಶ್ವಸಂಸ್ಥೆ ಮತ್ತು ಇತರ ನೆರವು ಸಂಸ್ಥೆಗಳಿಗೆ ಮನವಿ ಮಾಡಲಾಗಿದೆ. ಈ ಅವಘಡದಲ್ಲಿ ಒಬ್ಬನೇ ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾನೆ ಎಂದು ವರದಿಯಾಗಿದೆ.