ಮಂಗಳೂರು, ಸೆ. 15: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಗೊಳಪಟ್ಟ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟವು 2024-25ನೇ ಸಾಲಿನಲ್ಲಿ ರೂ.1174.00 ಕೋಟಿಗಳಷ್ಟು ರೂ. ವ್ಯವಹಾರ ನಡೆಸಿದ್ದು, ಒಟ್ಟು ರೂ.12.79 ಕೋಟಿ ನಿವ್ವಳ ಲಾಭ ದಾಖಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷರ ರವಿರಾಜ್ ಹೆಗ್ಡೆ ಅವರು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ಅವರು, 751 ಹಾಲು ಸಂಘಗಳು 3.97 ಲಕ್ಷ ಲೀಟರ್ ಹಾಲು ಶೇಖರಣೆ ಮಾಡುತ್ತಿದೆ. ಹಾಲಿನ ಶೇಖರಣೆ 2024-25 ನೇ ಸಾಲಿನಲ್ಲಿ ದಿನಕ್ಕೆ 3.42 ಲಕ್ಷ ಲೀಟರ್ ಸಂಗ್ರಹಣೆಯಾಗಿದ್ದು ಪ್ರಸ್ತುತ ಸಾಲಿನಲ್ಲಿ ಶೇ.16ರಷ್ಟು ಏರಿಕೆಯಾಗಿದ್ದು, ಒಟ್ಟು 3.97 ಲಕ್ಷ ಲೀಟರ್‌ನಷ್ಟು ಹಾಲು ಸಂಗ್ರಹಣೆಯಾಗುತ್ತಿದೆ ಎಂದರು.
ಶಾಸಕ ಅಶೋಕ್ ಕುಮಾರ್ ರೈ ಅವರು ಪುತ್ತೂರಿನಲ್ಲಿ ಒಕ್ಕೂಟಕ್ಕೆ 10.30 ಎಕರೆ ಸರಕಾರಿ ಜಾಗ ಒದಗಿಸಿರುವುದು ನಮ್ಮ ಯೋಜನೆ ವಿಸ್ತರಣೆಗೆ ಅನುಕೂಲವಾಗಿದೆ. ರೈತ ಕಲ್ಯಾಣ ಟ್ರಸ್ಟ್ 2024-25 ನೇ ಸಾಲಿನಲ್ಲಿ ಒಟ್ಟು ರೂ.2.05 ಕೋಟಿಯಷ್ಟು ಮೊತ್ತವನ್ನು ರೈತರ ಮರಣ, ವೈದ್ಯಕೀಯ ವೆಚ್ಚ ರಾಸುಗಳ ಮರಣಕ್ಕೆ ಪಾವತಿಸಲಾಗಿದೆ. ರೈತರ ರಾಸುಗಳಿಗೆ ವಿಮಾ ಯೋಜನೆಯಲ್ಲಿ ಒಟ್ಟು 30629 ರಾಸುಗಳಿಗೆ ವಿಮೆಯನ್ನು ಮಾಡಿಸಲಾಗಿದ್ದು, 1177 ಸಂಖ್ಯೆಯಷ್ಟು ಕ್ಷೇಮ್ ನೀಡಲಾಗಿದೆ ಎಂದವರು ಹೇಳಿದರು.
ಒಕ್ಕೂಟದಿಂದ ಐಸ್‌ಕ್ರೀಂ ಘಟಕ ರಚಿಸುವ ನಿಟ್ಟಿನಲ್ಲಿ ಯೋಜನರೆ ರೂಪಿಸಲಾಗುತ್ತಿದೆ. 2024-25 ನೇ ಸಾಲಿನಲ್ಲಿ ಹಸಿರು ಹುಲ್ಲು ಅಭಿವದ್ಧಿ ಹುಲ್ಲು ಕತ್ತರಿಸುವ ಯಂತ್ರ ಖರೀದಿ ಸೇರಿದಂತೆ ನಾನಾ ಯೋಜನೆಗಳಿಗೆ ರೂ.2.60 ಕೋಟಿಗಳನ್ನು ಅನುದಾನದ ರೂಪದಲ್ಲಿ ನೀಡಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕೆಎಂಎಫ್ ನಿರ್ದೇಶಕರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ಒಕ್ಕೂಟದ ಉಪಾಧ್ಯಕ್ಷರಾದ ಉದಯ ಕೋಟ್ಯಾನ್, ನಿದೇಶಕರಾದ ಎಸ್.ಬಿ. ಜಯರಾಮ ರೈ, ಕೆ. ಶಿವಮೂರ್ತಿ, ಕೆ. ಚಂದ್ರಶೇಖರ ರಾವ್, ಎಚ್. ಪ್ರಭಾಕರ್, ಮಮತಾ ಆರ್. ಶೆಟ್ಟಿ, ನಂದರಾಮ್ ರೈಘಿ, ಸುಧಾಕರ ರೈ ಒಕ್ಕೂಟದ ವ್ಯವಸ್ಥಾಪಕರಾದ ರವಿರಾಜ್ ಉಡುಪ, ಮಧುಸೂದನ್ ಕಾಮತ್ ಉಪಸ್ಥಿತರಿದ್ದರು.