ಮಂಗಳೂರು, ಅ.05 : ರಚನಾ ಕೆಥೊಲಿಕ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ವತಿಯಿಂದ ನಗರದ ಮಿಲಾಗ್ರಿಸ್ ಸಭಾ ಭವನದಲ್ಲಿ ರವಿವಾರ ರಚನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಮಾತಾಡಿ, ರಚನಾ ಸಂಸ್ಥೆಯು ಅರ್ಹ ಸಾಧಕರನ್ನುಆಯ್ದುಕೊಂಡು ಗೌರವಿಸಿದೆ. ಬದುಕಿನಲ್ಲಿ ಏನಾದರೊಂದು ಸಾಧನೆ ಮಾಡಲು ಅನೇಕ ಮಂದಿ ಪ್ರಯತ್ನಿಸುತ್ತಾರೆ. ಆದರೆ ಅದು ಎಲ್ಲರಿಗೂ ಕೈಗೂಡುವುದಿಲ್ಲ. ಯಾರ ಪ್ರೋತ್ಸಾಹವೂ ಇಲ್ಲದೆ ಸ್ವತಃ ಶಕ್ತಿಮೀರಿ ಪ್ರಯತ್ನಿಸಿ ಸಾಧಿಸುವವರೂ ಇದ್ದಾರೆ. ಅಂತಹವರನ್ನು ಗುರುತಿಸಿ ಗೌರವಿಸುವುದು ಶ್ಲಾಘನೀಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ಆಸ್ಟಿನ್ ರೋಚ್(ಉದ್ಯಮಿ), ಮಾಜಿ ಶಾಸಕ ಜೆ.ಆರ್.ಲೋಬೋ(ವೃತ್ತಿಪರ), ಮಂಗಳೂರಿನ ಡಾ.ಗಾಲ್ವಿನ್ ರೊಡ್ರಿಗಸ್ ಬೆಳ್ಳಾಯಿ (ಕೃಷಿಕ), ದುಬೈಯ ಪ್ರತಾಪ್ ಮೆಂಡೋನ್ಸಾ (ಅನಿವಾಸಿ ಉದ್ಯಮಿ), ಶೋಭಾ ಮೆಂಡೊನ್ಸಾ (ಮಹಿಳಾ ಸಾಧಕಿ) ಅವರಿಗೆ 2025ನೇ ಸಾಲಿನ ರಚನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಂಗಳೂರು ಬಿಷಪ್ ಅ.ವಂ.ಡಾ. ಪೀಟರ್ ಪಾವ್ ಸಲ್ದಾನ್ಹಾ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಹಾಗೆನೇ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೋ, ಶಾಸಕ ಐವನ್ ಡಿಸೋಜ ಅವರು ಮಾತಾಡಿದರು.
ಕಾರ್ಯಕ್ರಮದಲ್ಲಿ ರಚನಾ ಕೆಥೊಲಿಕ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ಇದರ ಅಧ್ಯಕ್ಷರಾದ ಜಾನ್ ಬಿ. ಮೊಂತೇರೊ ಸ್ವಾಗತಿಸಿದರು. ಉದ್ಯಮಿ ಜಾನ್ ಸುನಿಲ್, ಬೆಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ, ಡೀನ್ ಮತ್ತು ನಿರ್ದೇಶಕಿ ಡಾ.ಸಿಂಥಿಯಾ ಮಿನೇಜಸ್, ರಚನಾ ಸಂಸ್ಥೆಯ ಕಾರ್ಯದರ್ಶಿ ವಿಜಯ್ ವಿ. ಲೋಬೋ, ಕೋಶಾಧಿಕಾರಿ ನೆಲ್ಸನ್ ಮೊಂತೇರೊ, ಉಪಾಧ್ಯಕ್ಷ ನವೀನ್ ಲೋಬೋ, ಸಂಘಟಕ ಯುಲಾಲಿಯಾ ಡಿಸೋಜ ಉಪಸ್ಥಿತರಿದ್ದರು.