ಪುತ್ತೂರು, ಅ. 26 : ಸಾರ್ವಜನಿಕ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಟೋಬರ್ 20 ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ‘ದೀಪೋತ್ಸವ’ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಧಾರ್ಮಿಕ ದ್ವೇಷವನ್ನು ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ತರುವ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಪುತ್ತೂರು ತಾಲೂಕಿನ ನಿವಾಸಿ, ಮಹಿಳಾ ಪರ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ಈಶ್ವರಿ ಪದ್ಮುಂಜ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ ಈ ಸಂಬಂಧ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ದೂರಿನ ಆಧಾರದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಅ.25ರಂದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅವರ ಭಾಷಣವನ್ನು ‘ಕಹಳೆ ನ್ಯೂಸ್’ಯೂಟ್ಯೂಬ್ ಚಾನೆಲನ್ ನಲ್ಲಿ ಪ್ರಸಾರ ಮಾಡಲಾಗಿದೆ ಎಂದು ಈಶ್ವರಿ ಪದ್ಮುಂಜ ಅವರು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ದೂರಿನ ಆಧಾರದ ಮೇಲೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 25 ರಂದು ಅಪರಾಧ ಸಂಖ್ಯೆ 118/2025 ರ ಅಡಿಯಲ್ಲಿ, ಪ್ರಭಾಕರ ಭಟ್ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 79, 196, 299, 302, ಮತ್ತು 3(5) ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.











