ಮಂಗಳೂರು,ಅ. 27 : ನಗರದ ನ್ಯೂ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಗಳ ಮಂಗಳೂರು ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ 2025’ ಪಂದ್ಯಾವಳಿ ಸೋಮವಾರ ಉದ್ಘಾಟಿನೆಗೊಂಡಿತು.
ಬಳಿಕ ಮಾತಾಡಿದ ಅವರು, ದಕ ಜಿಲ್ಲೆಯ ಮಂಗಳೂರಿನಲ್ಲಿ ಅಂತರ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯ ಮೊದಲ ಬಾರಿ ನಡೆಯುತ್ತಿದೆ. ಇಲ್ಲಿನ ಒಳಾಂಗಣ ಕ್ರೀಡಾಂಗಣಕ್ಕೆ ಹಿಂದಿನ ಅವಧಿಯಲ್ಲಿ ಅಡಿಗಲ್ಲು ಹಾಕಿದ್ದು ನಾನೇ. ಉದ್ಘಾಟನೆ ನಾನೇ ಮಾಡಿತ್ತಿದ್ದೇನೆ ಎಂದರು.
ಜನಸಂಖ್ಯೆಯಲ್ಲಿ ದೇಶ ಜಗತ್ತಿನಲ್ಲೇ ನಂಬರ್ ವನ್ ಸ್ಥಾನದಲ್ಲಿದೆ. ಆದರೆ ಒಪಿಂಪಿಕ್ ಪದಕಗಳಲ್ಲಿ ಹಿಂದಿದೆ. ಹಾಗಾಗಿಯೇ ಕ್ರೀಡಾಪಟುಗಳಿಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲು ರಾಜ್ಯ ಸರಕಾರ ಮುಂದಾಗಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ವ್ಯವಸ್ಥೆ ಮಂಗಳೂರಿನ ಉರ್ವಾದ ಈ ಒಳಾಂಗಣ ಕ್ರೀಡಾಂಗಣದ ಮೂಲಕ ಮಾಡಲಾಗಿದೆ ಎಂದರು.
ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ ಮನೋಜ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದ.ಕ. ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಸ್ವಾಗತಿಸಿದರು.
ವೇದಿಕೆಯಲ್ಲಿ ಮಾಜಿ ಸಚಿವರಾದ ರಮಾನಾಥ ರೈ, ಅಭಯ ಚಂದ್ರಜೈನ್, ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಅಜಯ್ ಸಿಂಗ್, ಅಶೋಕ್ ಪಟ್ಟಣ್ಣ, ನಝೀರ್ ಅಹಮ್ಮದ್, ದ.ಕ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕೊಂಕಣಿ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್., ತುಳು ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಪ್ರಮುಖರಾದ ಲಾವಣ್ಯ ಬಳ್ಳಾಲ್, ವಿಶ್ವಾಸ್ ಕುಮಾರ್ ದಾಸ್, ಶಶಿಧರ ಹೆಗ್ಡೆ, ಪದ್ಮರಾಜ್, ಮನೋಜ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.











