ಮೆಕ್ಸಿಕೋ, ನ. 02 : ಇಲ್ಲಿನ ಸೊನಾರಾ ರಾಜ್ಯದಲ್ಲಿರುವ ಒಂದು ಸೂಪರ್ ಮಾರ್ಕೆಟ್ ನಲ್ಲಿ ಗುರುವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಅವಘಡದಲ್ಲಿ ಕನಿಷ್ಠ 23 ಮಂದಿ ಸಾವನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಸೂಪರ್ ಮಾರ್ಕೆಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಸಮಯದಲ್ಲಿ ಮಾರ್ಕೆಟ್ ಒಳಗೆ ಗ್ರಾಹಕರು ಹಾಗೂ ಸಿಬ್ಬಂದಿ ಇದ್ದರು. ಮಾರ್ಕೆಟ್ ಹೊರಗೆ ನಿಲ್ಲಿಸಿದ್ದ ಹಲವು ಕಾರುಗಳಿಗೂ ಬೆಂಕಿ ತಗುಲಿ ಅವು ಸಂಪೂರ್ಣ ಸುಟ್ಟು ಹೊಗಿವೆ ಎಂಬುದಾಗಿ ಪ್ರತ್ಯಕ್ಷ ಸಾಕ್ಷಿಗಳು ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ, ಶಾರ್ಟ್ ಸರ್ಕ್ಯೂಟ್ ಅಥವಾ ಗ್ಯಾಸ್ ಸೋರಿಕೆಯಿಂದ ಬೆಂಕಿ ಹೊತ್ತಿರುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಲವು ಗಂಟೆಗಳ ಶ್ರಮದ ನಂತರ ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಸ್ಥಳೀಯ ಆಡಳಿತ ತನಿಖೆಯನ್ನು ಆರಂಭಿಸಿವೆ
ಎಂದು ವರದಿಯಾಗಿದೆ.











