ಬಂಟ್ವಾಳ,ನ. 05 : ವೀರಕಂಭ ಗ್ರಾಮ ಪಂಚಾಯತ್ ನ 2025 – 26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಅಧ್ಯಕ್ಷೆ ಲಲಿತ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಬಂಟ್ವಾಳ ತಾಲೂಕಿನಲ್ಲಿ ಜರಗಿತು.
ಗ್ರಾಮ ಸಭೆ ಮಾರ್ಗದರ್ಶಿ ಅಧಿಕಾರಿಯಾಗಿ ಬಂಟ್ವಾಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿನಯ ಕುಮಾರಿ ಭಾಗವಹಿಸಿದ್ದರು. ಇಲಾಖೆವಾರು ಮುಖ್ಯಸ್ಥರುಗಳಾದ ಅರೋಗ್ಯ ಇಲಾಖೆ, ಕೃಷಿ ಇಲಾಖೆ, ಮೆಸ್ಕಾಂ ಇಲಾಖೆ, ಶಿಕ್ಷಣ ಇಲಾಖೆ,, ಶಿಶು ಅಭಿವೃದ್ಧಿ ಇಲಾಖೆ,ಕಂದಾಯ ಇಲಾಖೆಯವರು ತಮ್ಮ ತಮ್ಮ ಇಲಾಖೆಯ ಇಲಾಖಾ ಮಾಹಿತಿ ನೀಡಿದರು. ಈ ವೇಳೆ ಗ್ರಾಮಸ್ಥರಿಂದ ವಿವಿಧ ಬೇಡಿಕೆಗಳ ಮನವಿಯನ್ನು ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಪಂಚಾಯತ್ ಸದಸ್ಯರುಗಳಾದ ದಿನೇಶ್ ಪೂಜಾರಿ,, ನಿಶಾಂತ್ ರೈ, ಸಂದೀಪ್ ಪೂಜಾರಿ, ಜಯಪ್ರಸಾದ್, ಮೀನಾಕ್ಷಿ, ಅಬ್ದುಲ್ ರೆಹಿಮಾನ್,,ಜಯಂತಿ, ಉಮಾವತಿ, ಶೀಲಾ ನಿರ್ಮಲ ವೇಗಸ್ ಮೊದಲಾದವರು ಉಪಸ್ಥಿತರಿದ್ದರು.
ವೀರಕಂಭ ಗ್ರಾಮಸ್ಥರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕಿಯರು, ಸಂಜೀವಿನಿ ಒಕ್ಕೂಟದ ಸದಸ್ಯರುಗಳು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಗ್ರಾಮ ಸಭೆಯಲ್ಲಿ ಭಾಗವಹಿಸಿದ್ದರು.











