ಮಂಗಳೂರು, ನ. 07 : ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ.ನ ನವೀಕೃತ ‘ವಿಶ್ವಸೌಧ’ ಕಟ್ಟಡ ಉದ್ಘಾಟನೆ ಮತ್ತು ವಜ್ರಮಹೋತ್ಸವ ಸಮಾರೋಪ ಸಮಾರಂಭ ನ.9ರಂದು ನಗರದ ಕೊಟ್ಟಾರ ಚೌಕಿ ಆಡಳಿತ ಕಚೇರಿ ಬಳಿ ನಡೆಯಲಿದೆ ಎಂದು ಸೊಸೈಟಿಯ ಅಧ್ಯಕ್ಷರಾದ ಪಿ. ಉಪೇಂದ್ರ ಆಚಾರ್ಯ ಅವರು ಗುರುವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಬೆಳಗ್ಗೆ 10.30ಕ್ಕೆ ಸಭಾ ಕಾರ್ಯಕ್ರಮದಲ್ಲಿ ಕಟಪಾಡಿ ಪಡುಕುತ್ಯಾರು ಶ್ರೀ ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಜಗದ್ಗುರು ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಹಾಗೂ ಅರೆಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠ ಶ್ರೀ ವಿಶ್ವಕರ್ಮ ಪೀಠದ ಜಗದ್ಗುರು ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ದೀಪ ಪ್ರಜ್ವಲನೆ ನಡೆಸಿ, ಆಶೀರ್ವಚನ ನೀಡುವರು ಎಂದರು.
ನವೀಕೃತ ವಿಶ್ವಸೌಧ ಕಟ್ಟಡವನ್ನು ಎಸ್ಪಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ರಾಜೇಂದ್ರ ಕುಮಾರ್ ಅವರು ಉದ್ಘಾಟಿಸ ಲಿರುವರು.ನವೀಕೃತ ಆಡಳಿತ ಕಚೇರಿಯನ್ನು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನೆ ಮಾಡಲಿದ್ದಾರೆ. ಶಿಲ್ಪಿ ಡಾ. ಅರುಣ್ ಯೋಗಿರಾಜ್ ಅವರು ಪಾಲ್ಕೆ ಬಾಬುರಾಯ ಆಚಾರ್ಯ ಪುತ್ಥಳಿ ಅನಾವರಣ ಮಾಡುವರು. ಸ್ಪೀಕರ್ ಯು.ಟಿ. ಖಾದರ್ ಲಿಫ್ಟ್ ಉದ್ಘಾಟಿಸುವರು. ನವೀಕೃತ ಕೊಟ್ಟಾರಚೌಕಿ ಶಾಖೆಯನ್ನು ಸಂಸದ ಕ್ಯಾ, ಬ್ರಿಜೇಶ್ ಚೌಟ, ಪಾಲ್ಕೆ ಬಾಬುರಾಯ ಆಚಾರ್ಯ ವೇದಿಕೆಯನ್ನು ಕೆನರಾ ಜ್ಯುವೆಲ್ಲರ್ಸ್ನ ಧನಂಜಯ ಪಾಲ್ಕೆ ಉದ್ಘಾಟಿಸ ಲಿರುವರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ವೈ. ಭರತ್ ಶೆಟ್ಟಿ, ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ಆಡಳಿತಾಧಿಕಾರಿ ಕೆ. ಉಮೇಶ್ ಆಚಾರ್ಯ, ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್, ದ.ಕ. ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೂಟ್ಟು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ರಾವ್ ಕೆ. ಅತಿಥಿಯಾಗಿ ಭಾಗವಹಿಸುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಯಜೇಶ್ವರ, ಉಪಾಧ್ಯಕ್ಷ ಆನಂದ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.











