ಬಂಟ್ವಾಳ, ,ನ. 19 :ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಯುವ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆಯಲ್ಲಿ ಬುಧವಾರ ನಡೆದಿದೆ. ಸಹ ಸವಾರ ಗಂಭೀರವಾಗಿ ಗಾಯಗೊಂ ಡಿರುತ್ತಾರೆ.
ಮೃತಳನ್ನು ಕಡಬದ ಸುನಿಲ್ ಎಂಬವರ ಪುತ್ರಿ ಅನನ್ಯ (21) ಎಂದು ಗುರುತಿಸಲಾಗಿದೆ.
ಗಂಭೀರವಾಗಿ ಗಾಯಗೊಂಡ ಹಿಂಬದಿ ಸವಾರ ಗುರುವಾಯನಕೆರೆ ನಿವಾಸಿ ಪೃಥ್ವಿ
ಆಗಿರುತ್ತಾನೆ. ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಪೂಂಜಾಲಕಟ್ಟೆ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.











