ಬೆಳ್ತಂಗಡಿ, ಡಿ. 01 : ಬೆಳ್ತಂಗಡಿ: ಬಸ್ ಮತ್ತು ಬೈಕ್ ಸಂಭವಿಸಿದ ರಸ್ತೆ ದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪದ ಘಟನೆ ಬೆಳ್ತಂಗಡಿಯ ಪಾರ್ಪಿಕಲ್ಲು ಎಂಬಲ್ಲಿ ಭಾನುವಾರ ಸಂಭವಿಸಿದೆ.
ಮೃತರನ್ನು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ದೊಡ್ಡಗಾನಹಳ್ಳಿಯ ಪನ್ನ ಕೇಶವ ಗೌಡ ಅವರ ಪುತ್ರ ದೀಪಕ್ (24) ಎಂದು ಗುರುತಿಸಲಾಗಿದೆ.
ಧರ್ಮಸ್ಥಳದ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್, ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಘಟನೆ ನಡೆದ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ.










