ಬೆಂಗಳೂರು, ಡಿ.03 : ರಿಯಲ್ ಸ್ಟಾರ್ ಉಪೇಂದ್ರ, ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ರಾಜ್ ಬಿ ಶೆಟ್ಟಿ ಒಟ್ಟಾಗಿ ನಟಿಸಿರುವ 45 ಚಿತ್ರ ಡಿಸೆಂಬರ್ 25ರಂದು ಬಿಡುಗಡೆ ಆಗಲಿದೆ. ಈ ವರ್ಷದ ಕೊನೆಯ ಸಿನಿಮಾದ ಟ್ರೈಲರ್ ಶೀಘ್ರ ಬಿಡುಗಡೆ ಆಗಲಿದೆ.
ನಿರ್ಮಾಪಕ ರಮೇಶ್ ರೆಡ್ಡಿ ಅವರ 45 ಚಿತ್ರದ ಬಜೆಟ್ ₹100 ಕೋಟಿ ಎಂದು ಅಂದಾಜಿಸಲಾಗಿದೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. 45 ಚಿತ್ರಕ್ಕೆ ಹಾಲಿವುಡ್ ಪ್ರಾಜೆಕ್ಟ್‌ಗಳಿಗೆ ಕೆಲಸ ಮಾಡಿರುವ ಕೆನಡಾದ ಪ್ರತಿಷ್ಠಿತ ವಿ.ಎಫ್.ಎಕ್ಸ್ ಸಂಸ್ಥೆ “MARZ” ಕೆಲಸ ಮಾಡಿದೆ.
ಎಪ್ರೋ ಟಪಾಂಗ್ (‘AFRO ಟಪಾಂಗ್’) ಹಾಡು ತನ್ನ ವಿಶಿಷ್ಟ ಮ್ಯೂಸಿಕ್ ಮತ್ತು ಉಗಾಂಡದ ಪ್ರಸಿದ್ಧ ಜಿಟೊ ಕಿಡ್ಸ್ ತಂಡದ ಆಕರ್ಷಕ ಸ್ಟೆಪ್ಸ್‌ಗಳಿಂದ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಜಿಟೊ ಕಿಡ್ಸ್ ತಂಡವು ಭಾ ರತೀಯ ಚಿತ್ರರಂಗಕ್ಕೆ ಇದೇ ಮೊದಲ ಬಾರಿಗೆ ಎಂಟ್ರಿ ಕೊಟ್ಟಿದೆ. ಚಿತ್ರದ ಈ ಪ್ರಮೋಷನಲ್ ಸಾಂಗ್ ಯುಟ್ಯೂಬ್‌ನಲ್ಲಿ ಮೂಲಕ ದಾಖಲೆಯ ವಿಕ್ಷಣೆ ಪಡೆದಿದೆ. ಕೇವಲ ಪ್ರಚಾರಕ್ಕಾಗಿ ಬಿಡುಗಡೆ ಮಾಡಿದ ಹಾಡಿಗೆ ಇಷ್ಟೊಂದು ದೊಡ್ಡ ಮಟ್ಟದ ವೀಕ್ಷಣೆ ಪಡೆದಿದೆ. ಎಪ್ರೋ ಟಪಾಂಗ್ ಹಾಡಿನ ಯಶಸ್ಸಿನ ಅಲೆಯಲ್ಲಿ, ಡಿಸೆಂಬರ್ 25ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿರುವ ’45’ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಭಾರೀ ಓಪನಿಂಗ್ ಪಡೆಯುವ ನಿರೀಕ್ಷೆ ಇದೆ ಎಂದು ಚಿತ್ರತಂಡ ಹೇಳಿದೆ.











