ಗೋವಾ, ಡಿ. 07 : ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್ ಕ್ಲಬ್‌ನಲ್ಲಿ ಶನಿವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿ ಕನಿಷ್ಠ 23 ಜನರು ಮೃತಪಟ್ಟಿದ್ದಾರೆ.
ಗೋವಾದ ಬಾಗಾದಲ್ಲಿರುವ ಬಿರ್ಚ್ ಬೈ ರೋಮಿಯೋ ಲೇನ್ ಎಂಬ ಕ್ಲಬ್ನಲ್ಲಿ ಮಧ್ಯರಾತ್ರಿಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ತಡರಾತ್ರಿ ಸಂಭವಿಸಿದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಇಲ್ಲಿಯತನಕ 23 ಸಾವುಗಳು ವರದಿಯಾಗಿವೆ ಬೆಂಕಿಯ ಕಾರಣ ಖಚಿತಪಡಿಸಿಕೊಳ್ಳಲಾಗಿಲ್ಲ.
ಹಲವಾರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಭಾನುವಾರ ಬೆಳಗಿನ ಜಾವದವರೆಗೂ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದವು. ಮೃತರಲ್ಲಿ ಹೆಚ್ಚಿನವರು ಕ್ಲಬ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಎಂದು ಪೊಲೀಸರು ತಿಳಿಸಿದ್ದಾರೆ . ತಂಡಗಳು ರಕ್ಷಣಾ ಮತ್ತು ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿವೆ.











