ಮಂಗಳೂರು,ಡಿ. 27 : ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ಕ್ಯಾ.ಬ್ರಿಜೇಶ್ ಚೌಟ ನೇತ್ರತ್ವದ 9ನೇ ವರ್ಷದ ರಾಮ-ಲಕ್ಷ್ಮಣ ಜೋಡು ಕರೆ ‘ಮಂಗಳೂರು ಕಂಬಳ’ ಡಿ.27, ಶನಿವಾರ ಅದ್ದೂರಿಯಾಗಿ ಉದ್ಘಾಟನೆಗೊಂಡಿತು.

ಕಂಕನಾಡಿ ಗರೋಡಿ ಬ್ರಹ್ಮ ಬೈದರ್ಕಳ ಕ್ಷೇತ್ರದ ಅಧ್ಯಕ್ಷ ರಾದ ಚಿತ್ತರಂಜನ್ ಅವರು ದೀಪ ಬೆಳಗಿಸುವ ಮೂಲಕ ಕಂಬಳಕ್ಕೆ ಚಾಲನೆ ನೀಡಿದರು.ಕಟೀಲು ಕ್ಷೇತ್ರದ ಅರ್ಚಕ ಅನಂತಪದ್ಮನಾಭ ಅಸ್ರಣ್ಣರು ತೆಂಗಿನ ಕೊಂಬು ಅರಳಿಸುವ ಮೂಲಕ ಜೋಡುಕರೆಯಲ್ಲಿ ಕಂಬಳ ಕೋಣಗಳ ಓಟಕ್ಕೆ ಚಾಲನೆ ನೀಡಿದರು.


ಸಭೆಯನ್ನುದ್ದೇಶಿಸಿ ಮಾತನಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಮಂಗಳೂರು ಕಂಬಳ ಕ್ರೀಡಾಕೂಟವು ಸ್ಥಳೀಯ ಜಾನಪದ ಕ್ರೀಡೆಗಳನ್ನು ಸಂರಕ್ಷಿಸುವ ಸಲುವಾಗಿ ಆಯೋಜಿಸಲಾಗಿದೆ. ಇಂತಹ ಕಾರ್ಯಕ್ರಮಗಳ ಮೂಲಕ ತುಳುನಾಡಿನ ಸಂಸ್ಕೃತಿಯು ಮುಂದಿನ ಪೀಳಿಗೆಗೆ ತಲುಪುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವ ಸಲಹೆಗಾರರಾದ ಪ್ರಸಾದ್ ಕುಮಾರ್ ಶೆಟ್ಟಿ, ವಿಜಯ್ ಕುಮಾರ್ ಕೆಂಗಿನಮನೆ, ಉಪಾಧ್ಯಕ್ಷರಾದ ಕಿರಣ್ ಕುಮಾರ್ ಕೋಡಿಕಲ್, ಸಂಜಯ್ ಪ್ರಭು, ಜೋಯಲೆಸ್ ಡಿಸೋಜ, ವಸಂತ್ ಜೆ. ಪೂಜಾರಿ, ನಂದನ್ ಮಲ್ಯ, ಅಜಿತ್ ಬೋಪಯ್ಯ ಗುರುಚಂದ್ರ ಹೆಗಡೆ, ಅಭಿಷೇಕ್ ರೈ ಈಶ್ವರ್ ಪ್ರಸಾದ್, ಸಾಕ್ಷತ್ ಶೆಟ್ಟಿ, ಪ್ರಕಾಶ್ ಗರೋಡಿ, ಕಾರ್ಯದರ್ಶಿ ಅವಿನಾಶ್ ಸುವರ್ಣ, ಸುಜಿತ್ ಪ್ರತಾಪ್, ಸಂಚಾಲಕರಾದ ಸಾಂತ್ಯಗುತ್ತು ಸಚಿನ್ ಶೆಟ್ಟಿ ಸೇರಿದಂತೆ ಕಂಬಳ ಸಮಿತಿಯ ಪದಾಧಿಕಾರಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಕಂಬಳಾಭಿಮಾನಿಗಳು ಉಪಸ್ಥಿತರಿದ್ದರು.











