ಮಂಗಳೂರು,ಜ.01 : ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಮಂಗಳೂರು ಕಂಬಳ ಸಮಿತಿ ವತಿಯಿಂದ ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ ನಡೆದ 9ನೇ ವರ್ಷದ ಮಂಗಳೂರು ಕಂಬಳ ಕೂಟದಲ್ಲಿ ಒಟ್ಟು 141 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ 09 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 10 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 17 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 26 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 19 ಜೊತೆ ಮತ್ತು ನೇಗಿಲು ಕಿರಿಯ ವಿಭಾಗದಲ್ಲಿ 60 ಜೊತೆ ಕೋಣಗಳು ಸ್ಪರ್ಧೆ ಮಾಡಿದ್ದವು.
ಸ್ಪರ್ಧೆಯ ಫಲಿತಾಂಶ :
ಅಡ್ಡ ಹಲಗೆ ; ಪ್ರಥಮ: ಇರುವೈಲು ದೊಡ್ಡಗುತ್ತು ಜಗದೀಶ್ ಎಂ ಶೆಟ್ಟಿ “ಎ” (11.68) ಹಲಗೆ ಮುಟ್ಟಿದವರು:ತೆಕ್ಕಟ್ಟೆ ಸುಧೀರ್ ದೇವಾಡಿಗ ದ್ವಿತೀಯ: ನಾರ್ಯ ಗುತ್ತು ಕುವೆತ್ತಬೈಲು ಸಂತೋಷ್ ರೈ ಬೊಳ್ಯಾರು (11.83) ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ
ಹಗ್ಗ ಹಿರಿಯ; ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ (11.41) ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ ದ್ವಿತೀಯ: ನಲ್ಲೂರು ಬಜಗೋಳಿ ಶಿವಪ್ರಸಾದ್ ನಿಲಯ ಪ್ರಾಣೇಶ್ ದಿನೇಶ್ ಭಂಡಾರಿ “ಎ” (11.50) ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ಹಗ್ಗ ಕಿರಿಯ; ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ “ಬಿ” (11.41) ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ ದ್ವಿತೀಯ: ಎರ್ಮಾಳ್ ಡಾ.ಚಿಂತನ್ ರೋಹಿತ್ ಹೆಗ್ಡೆ (11.62) ಓಡಿಸಿದವರು: ಮಿಜಾರ್ ಅಶ್ವಥಪುರ ಶ್ರೀನಿವಾಸ ಗೌಡ
ನೇಗಿಲು ಹಿರಿಯ ; ಪ್ರಥಮ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ (10.87) ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್ ದ್ವಿತೀಯ: ಮಂಗಳೂರು ಮರಕಡ ಬಾಯಾಡಿ ಮನೆ ಶಾಂತ ಸಂಜಯ್ ಶೆಟ್ಟಿ “ಎ” (11.44) ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ನೇಗಿಲು ಕಿರಿಯ; ಪ್ರಥಮ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “ಬಿ” (11.56) ಓಡಿಸಿದವರು: ಕಾವೂರುದೋಟ ಸುದರ್ಶನ್ ದ್ವಿತೀಯ: ಮುಲ್ಕಿ ಚಿತ್ರಾಪು ಸಾನದಮನೆ ಅಂಬಿಕಾ ರವೀಂದ್ರ ಪೂಜಾರಿ (11.74) ಓಡಿಸಿದವರು: ಬಾರಾಡಿ ನತೀಶ್ ಸಫಲಿಗ
Subscribe to Updates
Get the latest creative news from FooBar about art, design and business.











